ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಭಾರಿ ಬೆಲೆ ತೆರಬೇಕಾಗಿದೆ: ಮುಖ್ಯಮಂತ್ರಿ ಚಂದ್ರು

Date:

Advertisements

‘ಇಂಡಿಯಾ’ ಒಕ್ಕೂಟದ ಪ್ರಹಾರದಿಂದ ಕಂಗಾಲಾಗಿರುವ ಪ್ರಧಾನಿ ನರೇಂದ್ರ ಮೋದಿ ಇ.ಡಿ, ಸಿಬಿಐ, ಐಟಿ ದಾಳಿಯ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಾಕ್ಷ್ಯಾಧಾರಗಳಿಲ್ಲದೆ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದು ಅಕ್ಷಮ್ಯ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಸಂವಿಧಾನ ವಿರೋಧಿ ನಡೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿ ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಮುಂಬರುವ ಐದು ವಿಧಾನಸಭೆ ಚುನಾವಣೆಗಳು ಸೇರಿದಂತೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿಯೇ ಸರ್ವಾಧಿಕಾರದ ಅಮಲಿನಲ್ಲಿ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅವರು ಎಷ್ಟೇ ದಾಳಿ ನಡೆಸಿದರೂ ನಾವು ಹೆದರುವುದಿಲ್ಲ. ಭೀತಿ ಎಂಬುದು ಕೇವಲ ತಪ್ಪಿತಸ್ಥರ ಎದೆಯಲ್ಲಿರುತ್ತದೆ. ನಮ್ಮ ಎದೆಯಲ್ಲಿ ಹೋರಾಟದ ಕಿಚ್ಚಿದೆ” ಎಂದರು.

“ಅರವಿಂದ ಕೇಜ್ರಿವಾಲ್‌ ಅವರನ್ನು ನಿಯಂತ್ರಿಸಲು ಮೋದಿ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ತಿರುಗೇಟು ಎಂಬಂತೆ ಪಂಜಾಬ್‌ನಲ್ಲೂ ಸ್ವತಂತ್ರ ಸರ್ಕಾರ ರಚಿಸಿದ್ದೇವೆ. ಇದೀಗ ದೇಶಾದ್ಯಂತ ಎಎಪಿ ಪರ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ಸೇರ್ಪಡೆಯಿಂದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಎನ್‌ಡಿಎ ಬಲ ದಿನದಿಂದ ದಿನಕ್ಕೆ ಕುಗ್ಗುತ್ತಿದೆ. ನಮ್ಮ ಮಿತ್ರಪಕ್ಷಗಳಿರುವ ರಾಜ್ಯಗಳಲ್ಲಿ ಜಾತಿ ಗಣತಿ ಬಿಡುಗಡೆಯಾಗುತ್ತಿದೆ. ಇದು ಮೋದಿ ಸರ್ಕಾರಕ್ಕೆ ಅರಗಿಸಿಕೊಳ್ಳಲಾಗುತ್ತಿಲ್ಲ” ಎಂದರು.

Advertisements

“ನಡೆದಿದೆ ಎನ್ನಲಾಗುತ್ತಿರುವ ಅಬಕಾರಿ ಹಗರಣದ ತನಿಖೆಯನ್ನು ಸುಮಾರು 15 ತಿಂಗಳಿಂದ ನಡೆಸಲಾಗುತ್ತಿದೆ. ನೂರಾರು ಅಧಿಕಾರಿಗಳು ಹಗಲು ರಾತ್ರಿ ಶೋಧ ನಡೆಸುತ್ತಿದ್ದಾರೆ. ಸುಮಾರು 1 ಸಾವಿರ ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ನಮ್ಮ ಮುಖಂಡರಾದ ಸತ್ಯೇಂದ್ರ ಜೈನ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಕಸ್ಟಡಿಯಲ್ಲಿಟ್ಟು ಕಿರುಕುಳ ನೀಡಿದ್ದಾರೆ. ಸಲ್ಲದ ಆರೋಪಗಳನ್ನು ಮಾಡಿ ಹಿಂಸಿಸಿದ್ದಾರೆ” ಎಂದು ದೂರಿದರು.

“ಮೋದಿ ಹೀನಾಯ ಸೋಲು ಅನುಭವಿಸುವುದು ಗ್ಯಾರಂಟಿ ಎಂಬಂತಾಗಿದೆ. ಹಾಗಾಗಿ, ವಿರೋಧ ಪಕ್ಷಗಳ ನಾಯಕರಿಗೆ ಇಲ್ಲಸಲ್ಲದ ಕಿರುಕುಳ ಕೊಟ್ಟಾದರೂ ಮುಂಬರುವ ಚುನಾವಣೆಯಲ್ಲಿ ಅಧಿಕಾರ ಹಿಡಿಯಬಹುದೇನೋ ಎಂಬ ಪ್ರಯತ್ನದಲ್ಲಿದ್ದಾರೆ. ಇದು ಮೋದಿ ಅವರ ಅಸಹಾಯಕತೆ, ಭೀತಿಯನ್ನು ತೋರಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಓವರ್ ಟೇಕ್ ಭರದಲ್ಲಿ ಸ್ಕಿಡ್ ಆದ ಬೈಕ್; ರಸ್ತೆಗೆ ಬಿದ್ದ ಸವಾರನ ಮೇಲೆ ಹರಿದ ಬಸ್

“ಕೇಂದ್ರ ಸರ್ಕಾರದ ವಿರುದ್ಧ, ನಿರ್ಭೀತಿಯಿಂದ ಸಾರ್ವಜನಿಕರ ಪರವಾಗಿ ಪ್ರಶ್ನೆಗಳನ್ನು ಕೇಳುವ ಭಾರತದ ಖ್ಯಾತ ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಅವರ ಫೋನ್, ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ವಿಚಾರಣೆ ನಡೆಸಲಾಗಿದೆ. ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ನಡೆದಿದೆ. ನಿನ್ನೆ ಸಂಜೆ ಟಿಎಂಸಿ ಸಂಸದರು ಕೃಷಿ ಭವನಕ್ಕೆ ಹೋದಾಗ, ಕೃಷಿ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ರೈತರ ಧ್ವನಿ ಎತ್ತಲು ಪ್ರಯತ್ನಿಸಿದಾಗ, ಅವರನ್ನು ಪೊಲೀಸರು ಕೃಷಿ ಭವನದಿಂದ ಹೇಗೆ ಎಳೆದೊಯ್ದರು ಮತ್ತು ಇಂದು 40 ಸ್ಥಳದಲ್ಲಿ ವಿರೋಧ ಪಕ್ಷಗಳ ನಾಯಕರುಗಳ ಸ್ಥಳಗಳ ಮೇಲೆ ದಾಳಿಯಾಗಿರುವುದನ್ನು ನೋಡಿದರೆ ಇವೆಲ್ಲವೂ ಮೋದಿ ಸರ್ಕಾರದ ಪತನದ ಮುನ್ನುಡಿಯಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X