ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು(ಇಂದು) ಶಿಕಾರಿಪುರ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲು ತಾಲೂಕು ಅಹಿಂದ ಸಂಘಟನೆ ಕರೆ ನೀಡಿದೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಶಿಕಾರಿಪುರ ತಾಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ಮಾಲತೇಶ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
ಬಂದ್ 4

ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಂಜೆ ಆರು ಗಂಟೆಯವರೆಗೆ ಈ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿರುವಂತಹ ಸಿದ್ದರಾಮಯ್ಯ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಇದನ್ನು ಜನತೆ ವಿರೋಧಿಸಬೇಕು. ಬಂದ್‌ಗೆ ಎಲ್ಲರೂ ಸಹಕರಿಸಬೇಕು ಎಂದು ಇಂದು ಬೆಳಗ್ಗಿನಿಂದಲೇ ಮೈಕ್ ಮೂಲಕ ಘೋಷಣೆ ಮಾಡಲಾಗಿತ್ತು. ಶಾಲಾ-ಕಾಲೇಜುಗಳು ಎಂದಿನಂತೆ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಬಂದ್‌ ಕರೆಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಸ್ಪಂದಿಸಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟುಗಳು ಬಂದ್ ಆಗಿದೆ. ಸಾರಿಗೆ ಕೂಡ ಬಂದ್ ಆಗಿದೆ. ಸ್ವಂತ ವಾಹನ ಇರುವವರು ಓಡಾಡುತ್ತಿದ್ದಾರೆ. ಆದರೂ, ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಪ್ರತಿಭಟನೆ

ಅಲ್ಲದೇ, ತಾಲೂಕು ಅಹಿಂದ ಸಂಘಟನೆಯ ವತಿಯಿಂದ ಬಿಜೆಪಿ-ಜೆಡಿಎಸ್‌ ವಿರುದ್ಧ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿದೆ.

ನಗರದ ಕನಕ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮಾಲಾರ್ಪಣೆ ಮಾಡಲಾಯಿತು. ನಂತರ ಖಾಸಗಿ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ಕೂಡ ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಅಹಿಂದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ್, ಪುರಸಭಾ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ, ಕಸಬಾ ಸೊಸೈಟಿ ನಿರ್ದೇಶಕ ನಗರದ ರವಿ ಕಿರಣ್, ಡಿ.ಆರ್.ಗಿರೀಶ್, ಅಹಿಂದ ಮುಖಂಡರಾದ ನಗರದ ರವೀಂದ್ರ ಕಿಟ್ಟಿ, ಬನ್ನೂರು ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...