ವಿಧಾನಸೌಧ’ದಲ್ಲಿ ಫೆ. 27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ; ಮಾರಾಟಗಾರರಿಂದ ಅರ್ಜಿ ಆಹ್ವಾನ

Date:

Advertisements

ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಂಡಿದ್ದಾರೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು, ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು. ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹು ಎಂದು ತಿಳಿಸಿದ್ದಾರೆ.

ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು, ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಫೆ. 7 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X