ಬೀದರ್‌ | ದಲಿತರ ಮೇಲೆ ನಿಲ್ಲದ ದೌರ್ಜನ್ಯ: ಭಾಲ್ಕಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಬೀದರ ಜಿಲ್ಲೆಯ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರ ವಹಿಸಿಕೊಂಡ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ಘಟನೆಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಬೀದರ್ ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಭಗತ್‌ ಸಿಂಗ್‌ ವೃತ್ತ, ತಹಸೀಲ್‌ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ʼಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿ ಅವಹೇಳನಕಾರಿ ಪದ ಬಳಸಿ ಅವಮಾನಿಸಿದ ಆರೋಪಿಯನ್ನು ಬಂಧಿಸಿಲ್ಲ. ಈ ಕುರಿತು ಭಾಲ್ಕಿ ಪಟ್ಟಣ ಠಾಣೆಯಲ್ಲಿ 2023ರ ನವೆಂಬರ್‌ 4ರಂದು ಪ್ರಕರಣ ದಾಖಲಾದರೂ ಕ್ರಮ ಕೈಗೊಂಡಿಲ್ಲ. ಭಾಲ್ಕಿ ತಾಲೂಕಿನ ಮಳಚಾಪೂರ ಗ್ರಾಮದಲ್ಲಿ 2024ರ ಫೆ.9ರಂದು ನಡೆದಿರುವ ಸಂವಿಧಾನ ಜಾಗೃತಿ ಜಾಥಕ್ಕೆ ಅಡ್ಡಿ ಉಂಟು ಮಾಡಿ ಜೈ ಶ್ರೀರಾಮ ಘೋಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. ಹಲ್ಲೆ ಖಂಡಿಸಿ ಅದೇ ಗ್ರಾಮದ ಪರಿಶಿಷ್ಟ ಜಾತಿ ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದರೂ ಅದು ʼನಾಮ್‌ ಕೇ ವಾಸ್ತೆʼ ಪ್ರಕರಣ ದಾಖಲಾಗಿದೆʼ ಎಂದು ದೂರಿದರು.

ʼಭಾಲ್ಕಿ ತಾಲೂಕಿನ ತಳವಾಡ (ಕೆ) ಗ್ರಾಮದ ಮೇಲ್ಜಾತಿ ಮಹಿಳೆ ಪರಿಶಿಷ್ಟ ಜಾತಿ ವ್ಯಕ್ತಿಗೆ ಜಾತಿ ನಿಂದನೆ ಮಾಡಿದರೂ, ಮಹಿಳೆ ಮೇಲೆ ಕ್ರಮಕೈಗೊಳ್ಳಲು ದೂರು ನೀಡಿದರೂ ಠಾಣೆಯಲ್ಲಿ ಹೆಸರಿಗಷ್ಟೇ ಪ್ರಕರಣ ದಾಖಲಾಗಿದೆ. ಹಾಲಹಿಪ್ಪರ್ಗಾ ಗ್ರಾಮದ ದಲಿತ ವ್ಯಕ್ತಿಗೆ ಮೇಲ್ಟಾತಿ ವ್ಯಕ್ತಿಗಳಿಂದ ಕರೆ ಮೂಲಕ ಜೀವ ಬೆದರಿಕೆ ಹಾಕಿದರು, ಈ ಕುರಿತು ಧನ್ನೂರ ಠಾಣೆಯಲ್ಲಿ 4 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಹೆಸರಿಗಷ್ಟೇ ಪ್ರಕರಣವಾಗಿದೆ. ಔರಾದ್‌ ತಾಲೂಕಿನ ಕೌಡಗಾಂವ್‌ ಗ್ರಾಮದ ಅಂಬೇಡ್ಕರ್‌ ವೃತ್ತ ತೆರವು ಪ್ರಕರಣ ಸಂಬಂಧ ಸಂತಪೂರ ಠಾಣೆಯಲ್ಲಿ ದೂರು ದಾಖಲಾದರೂ ಯಾರೊಬ್ಬರಿಗೂ ಬಂಧಿಸಿಲ್ಲʼ ಎಂದು ಆರೋಪಿಸಿದರು.

ʼಭಾಲ್ಕಿ ತಾಲೂಕಿನ ರಾಚಪ್ಪಾ ಗೌಡಗಾಂವ ಗ್ರಾಮದ ಪರಿಶಿಷ್ಟ ಜಾತಿ ಮಹಿಳೆ ಮೇಲೆ ಅದೇ ಗ್ರಾಮದ ಮೇಲ್ಟಾತಿಯ ಇಬ್ಬರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದರು. ಈ ಕುರಿತು ಕೊಲೆ ಯತ್ನ ಪ್ರಕರಣ ದಾಖಲಿಸದೇ ಹೆಸರಿಗಷ್ಟೇ ಪ್ರಕರಣ ದಾಖಲಿಸಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರದಿಂದ ದಲಿತ ಮಹಿಳೆಗೆ ಯಾರೂ ಕೂಡ ಹಲ್ಲೆ ನಡೆಸಿಲ್ಲ ಎಂದು ಹೇಳಿರುವುದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಭಾಲ್ಕಿ ತಾಲೂಕಿನ ರಾಚಪ್ಪಾ ಗೌಡಗಾಂವ್‌ ಗ್ರಾಮದ ದಲಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಇಬ್ಬರು ಯುವಕರನ್ನು ಕೂಡಲೇ ಬಂಧಿಸಬೇಕು. ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರವಧಿಯಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಿ ದಲಿತರಿಗೆ ನ್ಯಾಯ ಒದಗಿಸಬೇಕು. ಸದರಿ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಈ ಸಂಧರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಅಂಬೇಡ್ಕರ್ ಯುವ ಸೇನೆ ರಾಜ್ಯಾಧ್ಯಕ್ಷ ರಾಜಕುಮಾರ ಗುನಳ್ಳಿ, ಭೀಮ ಆರ್ಮಿ ಜಿಲ್ಲಾಧ್ಯಕ್ಷ ಅಂಬರೀಶ ಕುದುರೆ ಹಾಗೂ ಪ್ರಮುಖರಾದ ಮಹೇಶ ಗೋರನಾಳಕರ್, ಸಂತೋಷ ಏಣಕೋರೆ, ಪ್ರಕಾಶ ರಾವಣ, ಅವಿನಾಶ ದೀನೆ, ವೈಜಿನಾಥ ಶಿಂಧೆ, ಗೌತಮ್ ಪ್ರಸಾದ್, ಮಾರುತಿ ಸೂರ್ಯವಂಶಿ,‌ ಪ್ರದೀಪ ಭಾವಿಕಟ್ಟಿ, ಉತ್ತಮ ಕುಂದೆ, ಜಗನ್ನಾಥ ಹೊನ್ನಾ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...