ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ ಹೆಚ್ಚಳ: ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ

Date:

ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ(ಮೆದುಳು ಜ್ವರ)ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

- Advertisement -

ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್​​ನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾದ ಕುರಿತು ಕುರಿತು ಮಾಹಿತಿ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ಮೆದುಳು ಜ್ವರ ನೈಗ್ಲೇರಿಯಾ ಫೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆಯಾಗಿದೆ. ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ” ಎಂದು ಗುಂಡ್ಲುಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಲೀಂ ಪಾಷಾ ಬಿ ಆರ್ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ತಂಡಗಳು ಈ ಜಾಗೃತಿ ಕಾರ್ಯದಲ್ಲಿ ನಿರತವಾಗಿವೆ.

ಮೆದುಳು ಜ್ವರದ ಲಕ್ಷಣ 1

ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ಮೆದುಳಿನ ಜ್ವರವನ್ನು ತಪ್ಪಿಸಲು ಬಯಸಿದರೆ, ಕಲುಷಿತ ನೀರಿನಲ್ಲಿ ಈಜುವುದು, ಡೈವಿಂಗ್ ಮಾಡುವುದು ಅಥವಾ ಕೆರೆಗಳು, ಕೊಳಗಳು ಮತ್ತು ಸರಿಯಾಗಿ ನಿರ್ವಹಿಸದ ಕೊಳಗಳಲ್ಲಿ ಮುಳುಗುವುದನ್ನು ತಪ್ಪಿಸುವುದು ಮುಖ್ಯ. ಮೂಗಿನ ಹೊಳ್ಳೆಗಳೊಳಗೆ ನೀರು ಹೋಗದಂತೆ ನೋಡಿಕೊಳ್ಳುವುದರಿಂದ ಅಮೀಬಾದ ಅನಿವಾರ್ಯ ಸಂಪರ್ಕವನ್ನು ಕಡಿಮೆ ಮಾಡಬಹುದು.‌

ಇದನ್ನೂ ಓದಿದ್ದೀರಾ? ಮೆದುಳು ಜ್ವರದ ಭೀತಿ ಬೇಡ, ಜಾಗೃತಿ ಇರಲಿ: ಸೋಂಕು ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

1. ನಿಯಮಿತವಾಗಿ ಕ್ಲೋರಿನೀಕರಣ ಮಾಡಿಸಿಕೊಳ್ಳಬಹುದು.

2. ಬಾವಿಗಳು, ಟ್ಯಾಂಕ್‌ಗಳು ಮತ್ತು ಗೃಹಬಳಕೆಯ ನೀರು ಸಂಗ್ರಹಣೆ ಮಾಡುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸುವ ಮೂಲಕ ನೀರಿನ ಮಾಲಿನ್ಯವನ್ನು ಕಡಿಮೆ ಮಾಡಬಹುದು.

3. ಜನರು ಆರೋಗ್ಯದ ಬಗ್ಗೆ, ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಆರೋಗ್ಯದ ಕುರಿತು ಮುಂಜಾಗೃತೆ ವಹಿಸಬೇಕು.

4. ಧಾರ್ಮಿಕ ಆಚರಣೆಗಳು ಅಥವಾ ನೀರಿನ ಬಳಕೆಯ ಅಗತ್ಯವಿರುವ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಜಾಗರೂಕರಾಗಿರಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...