ದ್ವಿತೀಯ ಪಿಯುಸಿ ಪರೀಕ್ಷೆ | ಮೌಲ್ಯಮಾಪನ ಕೇಂದ್ರಗಳ ಹೆಚ್ಚಳ; ಕೆಎಸ್ಇಎಬಿ ಸುತ್ತೋಲೆ

Date:

Advertisements

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ(ಕೆಎಸ್ಇಎಬಿ) ಈ ವರ್ಷ ಮೌಲ್ಯಮಾಪನ ಕೇಂದ್ರಗಳ ಸಂಖ್ಯೆಯನ್ನು 65 ರಿಂದ 75ಕ್ಕೆ ಹೆಚ್ಚಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೆಎಸ್ಇಎಬಿಯ ಸುತ್ತೋಲೆ ಪ್ರಕಾರ “ಬೆಂಗಳೂರಿನಲ್ಲಿ ಒಟ್ಟು 10 ಮೌಲ್ಯಮಾಪನ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಕೇಂದ್ರಗಳ ಹೆಚ್ಚಳವು ಮೌಲ್ಯಮಾಪನವನ್ನು ಬೇಗನೆ ಪೂರ್ಣಗೊಳಿಸಲು ಮತ್ತು ಫಲಿತಾಂಶಗಳನ್ನು ಘೋಷಿಸಲು ಸಹಾಯ ಮಾಡುತ್ತದೆ” ಎಂದು ತಿಳಿದುಬಂದಿದೆ.

“ಫಲಿತಾಂಶಗಳನ್ನು ಮುಂಚಿತವಾಗಿ ಘೋಷಿಸುವುದರಿಂದ ಅನುತ್ತೀರ್ಣರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆಗಳಿಗೆ ಮತ್ತೆ ಹಾಜರಾಗಲು ಸಹಾಯ ಮಾಡುತ್ತದೆ. ಕಳೆದ ವರ್ಷದಿಂದ, ಮಂಡಳಿಯು ಅನುತ್ತೀರ್ಣರಾದ ಪಿಯು ವಿದ್ಯಾರ್ಥಿಗಳಿಗೆ ಒಂದರ ಬದಲು ಎರಡು ಪೂರಕ ಪರೀಕ್ಷೆಗಳನ್ನು ನಡೆಸುತ್ತಿದೆ. ಇದರಿಂದ ಅನೇಕರಿಗೆ ಅನುಕೂಲವಾಗಿದ್ದು, ಅದೇ ವರ್ಷವೇ ಮುಂದಿನ ತರಗತಿಗೆ ತೆರಳಲು ಅನುಕೂಲವಾಗುತ್ತದೆ” ಎಂದು ಕೆಎಸ್ಇಎಬಿ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ನಿಷ್ಠಾವಂತ ಕಾರ್ಯಕರ್ತರು ಕಣ್ಮರೆ: ಕೆಪಿಸಿಸಿ ಎಚ್ ದುಗ್ಗಪ್ಪ

“ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 22ಕ್ಕೆ ಕೊನೆಗೊಳ್ಳಲಿವೆ. ಮೌಲ್ಯಮಾಪನ ಪ್ರಕ್ರಿಯೆಯು ಆದಷ್ಟು ಬೇಗ ಪ್ರಾರಂಭವಾಗಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಕಳೆದ ವರ್ಷ, ಪರೀಕ್ಷೆಯು ಮಾರ್ಚ್ 29ರಂದು ಕೊನೆಗೊಂಡಿದ್ದು, ಏಪ್ರಿಲ್‌ 21ರಂದು ಫಲಿತಾಂಶವನ್ನು ಘೋಷಿಸಲಾಗಿತ್ತು. 2023 ರಲ್ಲಿ 7.3 ಲಕ್ಷ ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, ಈ ವರ್ಷ ಸುಮಾರು 6.9 ಲಕ್ಷ ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಅಭ್ಯರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಹೆಚ್ಚಿನ ಮೌಲ್ಯಮಾಪನ ಕೇಂದ್ರಗಳ ಸಹಾಯದಿಂದ ಹಿಂದಿನ ವರ್ಷಕ್ಕಿಂತ ವೇಗವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X