ರಾಜ್ಯದಲ್ಲಿ 350 ಆನೆಗಳು ಹೆಚ್ಚಳ: ಅರಣ್ಯ ಸಚಿವ ಈಶ್ವರ ಖಂಡ್ರೆ

Date:

  • 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು ಎಂದ ಸಚಿವ
  • ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನಾಗಿ ಆಚರಣೆ ಮಾಡಲು ನಿರ್ಧಾರ

ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350 ಆನೆಗಳು ಹೆಚ್ಚಳವಾಗಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು.

2017ರಲ್ಲಿ ರಾಜ್ಯದಲ್ಲಿ ಸುಮಾರು 6,049 ಆನೆಗಳಿದ್ದವು, ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದೆ. ಆ ಮೂಲಕ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು. ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಎಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.

ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ. ಆರ್‌. ಸುಕುಮಾರ್‌ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.

ರಾಜ್ಯದ 32 ವಿಭಾಗಗಳಿಂದ 3,400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು. ಆನೆ ಗಣತಿಯನ್ನು ನೇರ ಎಣಿಕೆ ಅಥವಾ ಬ್ಲಾಕ್‌ ಎಣಿಕೆ, ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಎಣಿಕೆ ಹಾಗೂ ವಾಟರ್‌ ಹೋಲ್‌ ಎಣಿಕೆ ಎಂಬ ಮೂರು ವಿಧಾನಗಳಲ್ಲಿ ನಡೆಸಲಾಯಿತು ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಎಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18,975 ಚದರ ಕಿ.ಮೀ ಪ್ರದೇಶದ ಪೈಕಿ 6,104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...