- ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆ
- ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ರಾಯಚೂರು 41 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 40 ಡಿಗ್ರಿ ಸೆಲ್ಸಿಯಸ್, ವಿಜಯಪುರ 40.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 36.5 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ.
ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಗುರುವಾರ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ನಾನಾ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!
ಕರಾವಳಿ ಕರ್ನಾಟಕದ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.