ಬೀದರ್‌ | ಸಾಲಕ್ಕೆ ಹೆದರಿ ಕಾಲುವೆಗೆ ಬಿದ್ದು ರೈತ ಆತ್ಮಹತ್ಯೆ

Date:

ಸಾಲಬಾಧೆ ತಾಳಲಾರದೆ ಕಾರಂಜಾ ಕಾಲುವೆಗೆ ಬಿದ್ದು ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಜಿ-ಬ್ಯಾಲಹಳ್ಳಿ(ಕೆ) ಗ್ರಾಮದ ಸಮೀಪ ನಡೆದಿದೆ.

- Advertisement -

ಖಟಕ ಚಿಂಚೋಳಿ ನಿವಾಸಿ ಹಣಮಂತ (32) ಆತ್ಮಹತ್ಯೆ ಮಾಡಿಕೊಂಡ ರೈತ. ರೈತ ಹಣಮಂತ ಕೃಷಿ ಚಟುವಟಿಕೆಗಾಗಿ ಕೆನರಾ ಬ್ಯಾಂಕ್‌ನಲ್ಲಿ 2 ಲಕ್ಷ ಹಾಗೂ ಕೈಗಡವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅನಾವೃಷ್ಟಿಯಿಂದ ಮೂರ್ನಾಲ್ಕು ವರ್ಷದಿಂದ ಹೊಲದಲ್ಲಿ ಬೆಳೆ ಬೆಳೆಯಲಾಗಲಿಲ್ಲ. ಇದರಿಂದ ನೊಂದ ರೈತ ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಡಿ.6ರಂದು ಹೊಲಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದರು. ಡಿ.8ರಂದು ಕಣಜಿ ಗ್ರಾಮದ ಸಿವಾರದ ಬಳಿಯ ಕಾರಂಜಾ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಳಗಾವಿ ಸುವರ್ಣ ಸೌಧದಲ್ಲಿ ʼಅನುಭವ ಮಂಟಪʼ ಚಿತ್ರ ಅನಾವರಣ : ಪಟ್ಟದ್ದೇವರು ಹರ್ಷ

ಈ ಕುರಿತು ಮೃತ ರೈತನ ಪತ್ನಿ ನೀಡಿದ ದೂರಿನ ಮೇರೆಗೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...