ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಜಿಲ್ಲಾಡಳಿತದ ವತಿಯಿಂದ ಸರ್ವರ ಸಹಕಾರದೊಂದಿಗೆ ಆಗಸ್ಟ್. 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

- Advertisement -

ಸ್ವಾತಂತ್ರ್ಯ ದಿನವನ್ನು ಅಚ್ಚುಕಟ್ಟಾಗಿ ಆಚರಿಸಲು ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಸಲಹೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈಜೋಡಿಸಬೇಕು. ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆ ಅಭಿಪ್ರಾಯಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದೇ ವೇಳೆ ಮಾತನಾಡಿದ ಸಂಘಟನೆಗಳ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಲೋಪವಿಲ್ಲದೇ ಕೈಗೊಳ್ಳಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಪಥ ಸಂಚಲನ, ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಪಥಸಂಚಲನ ತಾಲೀಮು, ಸ್ವಾತಂತ್ರ್ಯೋತ್ಸವ ದಿನದಂದು ಕಾರ್ಯಕ್ರಮ ನಡೆಯುವ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುದ್ದ ಕುಡಿಯುವ ನೀರು, ವೈದ್ಯರನ್ನು ಒಳಗೊಂಡ ತಂಡ, ಆಂಬುಲೆನ್ಸ್ ನಿಯೋಜನೆ ಮಾಡಬೇಕು ಎಂದರು.

ಬ್ಯಾಂಕುಗಳು, ಎಲ್ಲ ಗ್ರಾಮ ಪಂಚಾಯಿತಿಗಳು, ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನ ಆಚರಿಸಬೇಕು. ಮಹಾತ್ಮ ಗಾಂಧಿಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಗೌರವಿಸಬೇಕು. ಧ್ವಜ ಸಂಹಿತೆ ಪ್ರಕಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ಪ್ಲಾಸ್ಟಿಕ್ ಧ್ವಜಗಳು ಮಾರಾಟವಾಗಬಾರದು. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸ್ವಾತಂತ್ರೋತ್ಸವದಂದು ಗೌರವಿಸಬೇಕು ಎಂಬುದೂ ಸೇರಿದಂತೆ ಹಲವು ಸಲಹೆಗಳನ್ನು ಮುಖಂಡರು ನೀಡಿದರು.

ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಆಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರು ಮಾತನಾಡಿ ಶಿಷ್ಟಾಚಾರ ಅನುಸಾರ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತದೆ. ಈಗಾಗಲೇ, ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಆಹ್ವಾನ ಪತ್ರಿಕೆ ಮುದ್ರಣ ಸಮಿತಿ, ಧ್ವಜಾ ಸಿದ್ದತಾ ಸಮಿತಿ, ಸಾಂಸ್ಕೃತಿಕ ಸಮಿತಿ ಸೇರಿದಂತೆ ಇನ್ನಿತರ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಸಮಿತಿಯ ಅಧ್ಯಕ್ಷರು, ಸದಸ್ಯರು ಸೂಕ್ತ ಕ್ರಮವಹಿಸಲಿದ್ದಾರೆ ಎಂದರು.

ಮುಖಂಡರು ನೀಡಿರುವ ಸಲಹೆ ಅಭಿಪ್ರಾಯಗಳ ಅನುಸಾರ ಅಧಿಕಾರಿಗಳಿಗೆ ಸಿದ್ದತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ. ಯಾವುದೇ ನ್ಯೂನ್ಯತೆಗಳಿಲ್ಲದೆ ಸ್ವಾತಂತ್ರ್ಯ ದಿನ ಆಚರಣೆಗೆ ಕಾರ್ಯೋನ್ಮುಖರಾಗಲು ಕ್ರಮ ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ಹಬ್ಬದ ಆಚರಣೆಗೆ ಸರ್ವರು ಸಹಕಾರ ನೀಡಬೇಕು ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 10 ರಂದು ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ; ಕುಟುಂಬ ಸಮ್ಮಿಲನ ಕಾರ್ಯಕ್ರಮ : ಉಮರ್ ಯು ಹೆಚ್

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ವಿವಿಧ ಸಂಘಟನೆಗಳ ಮುಖಂಡರಾದ ವೆಂಕಟರಮಣ ಪಾಪು, ಚಾ.ರಂ. ಶ್ರೀನಿವಾಸಗೌಡ, ಮಹದೇವಶೆಟ್ಟಿ, ನಿಜಧ್ವನಿ ಗೋವಿಂದರಾಜು, ಚಾ. ಹ. ಶಿವರಾಜು, ಚಾ. ಗು. ನಾಗರಾಜು, ಪಣ್ಯದಹುಂಡಿ ರಾಜು, ಜಿ. ಬಂಗಾರು, ಸಿ. ಎಂ. ನರಸಿಂಹ ಮೂರ್ತಿ, ಬ್ಯಾಡಮುಡ್ಲು ಬಸವಣ್ಣ, ಶಿವು, ಆಲೂರುಮಲ್ಲು, ಸಿ. ಎಂ. ಶಿವಣ್ಣ, ಎಲ್. ಸುರೇಶ್, ಪರ್ವತ್‍ರಾಜ್, ಆಲೂರು ರವಿಕುಮಾರ್, ಮಹೇಶ್‍ಗೌಡ, ಇನ್ನಿತರ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...