ಇಂಡಿ | ಮುಂದುವರೆದ ಮಹಾಮಳೆ; ನದಿಪಾತ್ರದ ಜನರಲ್ಲಿ ಪ್ರವಾಹದ ಆತಂಕ

Date:

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ಗಡಿಭಾಗದ ಭೀಮಾ ನದಿ ಅರ್ಭಟ ಮುಂದುವರೆದಿದೆ. ಮಹಾರಾಷ್ಟ್ರದ ಉಜ್ಜನಿ, ಸಿನಾ, ವೀರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ನದಿಪಾತ್ರದ ಗ್ರಾಮಗಳ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.

- Advertisement -

ಭೀಮಾ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಕರ್ನಾಟಕ- ಮಹಾರಾಷ್ಟ್ರ ಸಂಧಿಸುವ ದಕ್ಷಿಣ ಸೋಲಾಪುರ ತಾಲೂಕಿನ ವಡಕಬಳಿ ಮಧ್ಯದ ಸಿನಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು, ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿನಾ, ಉಜ್ಜನಿ, ವೀರ ಜಲಾಶಯದಿಂದ ಭೀಮಾನದಿಗೆ ಮಂಗಳವಾರ 2.50 ಲಕ್ಷ ಕ್ಯುಸೆಕ್ ಅಧಿಕ ನೀರು ಹರಿಬಿಡಲಾಗಿದೆ. ಸಿನಾ ಮಹಾನೀರಿಗೆ ಮಹಾರಾಷ್ಟ್ರದ ಅನೇಕ ಗ್ರಾಮಗಳು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿವೆ. ಇಂಡಿ ತಾಲೂಕಿನ ಹಿಂಗಣಿ ಬ್ಯಾರೇಜ್‌ನಿಂದ ಕೆಳ ಭಾಗದ ಗ್ರಾಮಗಳಲ್ಲಿ ಪ್ರವಾಹ ಎದುರಾಗುವ ಆಂತಕ ಕಾಡುತ್ತಿದೆ.

ಭೀಮಾ ಪ್ರವಾಹದಿಂದ ಎರಡು ರಾಜ್ಯದ ನದಿ ತೀರದ ಸಾವಿರಾರು ಎಕರೆ ಜಮೀನದಲ್ಲಿನ ಕಬ್ಬು, ತೊಗರಿ, ಹತ್ತಿ, ಬಾಳೆ, ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿವೆ. ಮತಕ್ಷೇತ್ರ ಶಾಸಕರು ಹಾಗೂ ಅಧಿಕಾರಿಗಳು ಭೇಟಿ ಪರೀಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ದಕ್ಷಿಣ ಸೋಲಾಪುರ ತಾಲೂಕಿನ ವಡಕಬಳಿ, ಹತ್ತೂರ ಸೇತುವೆ ಬಳಿ ಸಿನಾನದಿ ಹರಿವು ಹೆಚ್ಚಿದ್ದು, ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ನುಗ್ಗಿದ ಹಿನ್ನೆಲೆ ಹೆದ್ದಾರಿ ನಡುವಿನ ಸಂಪರ್ಕ ಕಡಿತಗೊಂಡಿದೆ. ರಸ್ತೆ ಉದ್ದಕ್ಕೂ ವಾಹನಗಳು ನಿಂತುಬಿಟ್ಟಿವೆ.

ಗುರುವಾರ ಬೆಳಗ್ಗೆಯಿಂದ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಹೀಗಾಗಿ ಸಾರಿಗೆ ಬಸ್ಸು ರಾಜ್ಯದ ಗಡಿಯವರಗೆ ಮಾತ್ರ ಸಂಚಾರಿಸಲು ಅವಕಾಶವಿದೆ. ರಾಜ್ಯದ ಒಳಗೆ ಮತ್ತು ಹೊರ ಸಂಚರಿಸುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ನೀರಿನ ಹರಿಯುವ ಮಟ್ಟ ಕಡಿಮೆಯಾಗುವ ಸಂಭವಿದೆ ಎಂದು ತಜ್ಞರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...