ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ, ಆಯೋಜನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ನಗರದ ಮಾರುಥಿ ವೀಥಿಕಾದಲ್ಲಿ ನಡೆಯಿತು. 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿಸಲಾಯಿತು.
ಧ್ವಜ ಪ್ರದರ್ಶನಕ್ಕೆ ಹಿರಿಯ ಸಿವಿಲ್ ನ್ಯಾಯಾದೀಶರು, ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕೋಟಕ್ ಮಹಿಂದ್ರಾ ಬ್ಯಾಂಕಿನ ಮ್ಯಾನೇಜರ್ ವಿವೇಕ್ ಹೆಗ್ಡೆ, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂನ್ಸುಪಾಲೆ ವನಿತಾ, ಹಾಗೂ ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಪಾಕತಜ್ಞ ಶ್ರೀಧರ ಭಟ್ ಉಪಾಹಾರವನ್ನು ಉಚಿತವಾಗಿ ಒದಗಿಸಿದರು.