ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸ್ತುವೆಗೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ.
ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್ ಜೋಡಣೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಒಟ್ಟು 60 ಮೀಟರ್ ನ ಗರ್ಡರ್ ಇದಾಗಿದ್ದು, 1.5 ಮೀ ಪುಶ್ ಆಗಲು 20 ನಿಮಿಷ ಕಾಲಾವಕಾಶ ಬೇಕಿದೆ. ಸಂಪೂರ್ಣಗೊಂಡ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ. ಮೇಲ್ಬಾಗದಲ್ಲಿ ವಾಹನ ಸಂಚಾರ ಓಡಾಟ ಮಾಡುವ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದು ಎಂದರು.
ಮೇ ತಿಂಗಳ ಅಂತ್ಯದೊಳಗೆ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಮುಗಿಯದಿದ್ದರೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಅಮೃತ್ ಶೆಣೈ ಎಚ್ಚರಿಕೆ ನೀಡಿದ್ದರು.