ಇಂಡಿ | ಮುನ್ನೆಚ್ಚರಿಕೆ ಕ್ರಮ ಯಶಸ್ವಿ, ಕೆರೆಗಳ ನೀರಿನ ಮಟ್ಟ ಇಳಿಕೆ: ಡಿಸಿ ಡಾ. ಆನಂದ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆಯ ಏರಿಯಾ ಹಾನಿಯನ್ನು ತಡೆಯಲು ಮುನ್ನೆಚ್ಚೆರಿಕೆ ಕ್ರಮವಾಗಿ ಚಾನೆಲ್ ನಿರ್ಮಾಣ ಮಾಡಿ ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದ್ದಾರೆ.

- Advertisement -

“ಹೋರ್ತಿ ಕೆರೆಯನ್ನು 1972ರಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ ಇದ್ದು, ಕೆರೆಯ ವಿಸ್ತೀರ್ಣ18 ಹೆಕ್ಟರ್ ಇದೆ. ಏರಿಯಾ ಎತ್ತರ 11ಮೀ ಹಾಗೂ ಉದ್ದ 400ಮೀ ಇದ್ದು, ಪ್ರಸ್ತುತ ಕೆರೆಯನ್ನು ಕೃಷ್ಣಭಾಗ್ಯ ಜಲ ನಿಗಮದ ವತಿಯಿಂದ ಕೆರೆತುಂಬವಾ ಯೋಜನೆಯಡಿ ಕೆರೆ ತುಂಬಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಈ ಕೆರಿಗೆ ಕೋಡಿ ಇಂದ ಸುಮಾರು ಒಂದು ತಿಂಗಳಿಂದ ನೀರು ಹರಿದು ಹೋಗಿರುತ್ತದೆ. ಸೆ.28 ಸಂಜೆ 7 ಗಂಟೆಗೆ ಕೆರೆಯ ಏರಿಯ 30 ಮೀಟರ್ ಉದ್ದದಷ್ಟು ಹಾಗೂ 0.30 ಮೀಟರ್‌ನಷ್ಟು ಕುಸಿದಿರುವುದು ಕಂಡುಬಂದಿದೆ. ತದನಂತರ ಕೋಡಿಯನ್ನು ಇಳಿಸಲು ಸೆ. 29 ರಂದು ಜೆಸಿಬಿ ಮತ್ತು ಹಿಟಾಚಿ ಬ್ರೇಕರ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಹಾಕಲು ಸತತ ಮೂರು ದಿನಗಳ ಕಾಲ ಕೆರೆಯಲ್ಲಿ ಎರಡು ಅಡಿಯಷ್ಟು ನೀರನ್ನು ಇಳಿಸಲಾಯಿತು. ಅದಾಗ್ಯ ಕೂಡಾ ಪ್ರತಿದಿನ ನೀರಿನ ಒತ್ತಡದಿಂದಾಗಿ ಕ್ರಮೇಣವಾಗಿ ಏರಿಯ ಕುಸಿಯುವುದು ಕಂಡುಬಂದಿದೆ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿ: ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

“ಇದರಿಂದಾಗಿ ಅ.2ರಂದು ಹೆಚ್ಚಿನ ಪ್ರಮಾಣದ ಏರಿಯಾ ಕುಸಿತ ಕಂಡ ಕಾರಣ ಹೋರ್ತಿ ಕೆರೆಯ ಕೆಳ ಭಾಗದಲ್ಲಿ ಒಟ್ಟು ಮೂರು ಕೆರೆಗಳಿದ್ದು, ಅವುಗಳು ಕೂಡಾ ಈಗಾಗಲೇ ಕೃಷ್ಣಾ ಭಾಗ್ಯ ಜಲ ನಿಗಮ ವತಿಯಿಂದ ಭರ್ತಿ ಮಾಡಲಾಗಿದೆ. ಈ ಕೆರೆಗಳಿಗೆ ಹಾನಿಯಾಗದಂತೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆಗಟ್ಟಲು ಮುನ್ನೆಚ್ಚೆರಿಕೆ ಕ್ರಮವಾಗಿ ಕೆರೆಯ ಕೊಡಿಯಿಂದ ಸುಮಾರು 30 ಮೀಟರ್ ದೊರದಲ್ಲಿ ಹಾಗೂ ಕುಸಿತ ಕಂಡುಬಂದ ಸ್ಥಳದಿಂದ 50ಮೀಟರ್ ಅಂತರದಲ್ಲಿ ಕ್ರಮೇಣ ನೀರನ್ನು ಹೊರೆಗೆ ಹಾಕಲು ಕೃತಕವಾಗಿ ಕೆರೆಯ ಏರಿಯಾದಲ್ಲಿ ಚಾನಲ್ ನಿರ್ಮಾಣ ಮಾಡಿ ಹಂತ ಹಂತವಾಗಿ ನೀರನ್ನು ಹೊರಹಕಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...