ಇಂಡಿ | ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ: ಶಾಸಕ ಯಶವಂತರಾಯಗೌಡ ಪಾಟೀಲ

Date:

ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತದಿಂದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇಂಡಿ ತಾಲೂಕಿನ ನಿಂಬೆಗೆ ದೊರಕಿರುವ ಜಿಐ ಟ್ಯಾಗ್‌ನಿಂದ ಇಂಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಕು ಚೆಲ್ಲಿದೆ. ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ಇಂಡಿ, ಭವಿಷ್ಯದಲ್ಲಿ ಮುಂದುವರೆದ ತಾಲೂಕು ಆಗಲಿದೆ. ಸಿಎಂ ಸಿದ್ದರಾಮಯ್ಯನವರೇ ಇದನ್ನು ಹೇಳಿದ್ದಾರೆ” ಎಂದರು.

“ಜಿಲ್ಲೆಗೆ ಮಂಜೂರು ಆಗಬೇಕಾಗಿದ್ದ ಕಾರ್ಮಿಕ ಮಕ್ಕಳ ವಸತಿ ಶಾಲೆಯನ್ನು ಇಂಡಿ ತಾಲೂಕಿಗೆ ತಂದಿದ್ದೇನೆ. ಮಾತಿಗಿಂತ ಕಾರ್ಯಗಳು ಮಾತನಾಡಬೇಕು ಎಂಬ ಸಿದ್ದಾಂತ ಹೊಂದಿದವನು ನಾನು. ಕೇಂದ್ರ, ರಾಜ್ಯಗಳು ಸಮನ್ವಯತೆಯಿಂದ ಆಡಳಿತ ನಡೆಸಬೇಕಾಗಿದೆ. ದೇಶಾಭಿಮಾನದಿಂದ ಹುತಾತ್ಮರ ಕನಸು ನನಸು ಮಾಡಲು ಶ್ರಮಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸರ್ವರಿಗೂ ಸಮಬಾಳು, ಸಮಪಾಲು ಸಿದ್ಧಾಂತದ ಆಧಾರದ ಮೇಲೆ ರಾಜ್ಯ ಸರ್ಕಾರ ನಡೆಯುತ್ತಿದೆ. ಜನರ ಕಲ್ಯಾಣಕ್ಕೆ ಸಂವಿಧಾನವೇ ಸ್ಫೂರ್ತಿಯಾಗಿದೆ. ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡು ನಮ್ಮದ್ದು, ತ್ಯಾಗ, ಬಲಿದಾನದಲ್ಲಿಯೂ ನಮ್ಮ ಜಿಲ್ಲೆ ಮುಂದಿದೆ. ಜಿಲ್ಲೆಯಲ್ಲಿ ಮಳೆಯಾಗಿದೆ. ಕಾಲುವೆ ಮೂಲಕವೂ ಕೆರೆಗಳನ್ನು ತುಂಬಿಸಲಾಗಿದೆ” ಎಂದು ಹೇಳಿದರು.

“ನಮ್ಮ ಪೂರ್ವಜರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನವನ್ನು ಸ್ಮರಿಸುವ ದಿನ ಆಗಸ್ಟ್‌ 15. ತ್ಯಾಗ, ಬಲಿದಾನದ ಮೂಲಕ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಇಂದು ನಾವೆಲ್ಲರೂ ಸಂಭ್ರಮಿಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ತಳಕಲ್‌ನಲ್ಲಿ 20 ಮಂದಿ ಮೇಲೆ ಬೀದಿ ನಾಯಿಗಳ ದಾಳಿ: ಇಬ್ಬರು ಬಾಲಕರು ಜಿಲ್ಲಾಸ್ಪತ್ರೆಗೆ ದಾಖಲು

ಡಿವೈಎಸ್‌ಪಿ ಜಗದೀಶ ಎಚ್ ಎಸ್ ತಹಶೀಲ್ದಾರ್ ಬಿ ಎಸ್ ಕಡಭಾವಿ, ತಾಪಂ ಇಒ ಡಾ. ಬಿ ಎಚ್ ಕನ್ನೂರ, ಪುರಸಭೆ ಮುಖ್ಯಾಧಿಕಾರಿ ಸಿದ್ರಾಯ ಕಟ್ಟಿಮನಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ ಬೊರಾಮಣಿ, ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಬಿಇಒ ಮುಜಾವರ, ಭೀಮನಗೌಡ ಪಾಟೀಲ, ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಸಾಗರ ಬಿರಾದಾರ, ಶ್ರೀಶೈಲಗೌಡ ಪಾಟೀಲ, ಜಹಾಂಗೀರಸೌದಾಗರ, ಮುಸ್ತಾಕ ಇಂಡಿಕರ, ಭೀಮಾಶಂಖರ ಮೂರಮನ, ಉಮೇಶ ದೇಗಿನಾಳ, ಸತೀಶ ಕುಂಬಾರ, ಶಬ್ಬಿರ ಖಾಜಿ, ಅಯುಬ ಬಾಗವಾನ, ಜಾವೇದ ಮೋಮಿನ, ಬಾಬು ಗುಡಮಿ, ಮಹಾದೇವಪ್ಪ ಏವೂರ, ಎಚ್.ಎಸ್.ಪಾಟೀಲ, ದಯಾನಂದ ಮಠ, ಭೀಮಣ್ಣ ಕವಲಗಿ, ಸಿಪಿಐ ಪ್ರದೀಪ ಭೀಸೆ, ಪಿಎಸೈ ಸುರೇಶ ಗೆಜ್ಜಿ, ಚಂದ್ರಶೇಖರ ವಾಲಿಕಾರ, ಎಸ್.ರ್ಆ.ಮೇಂಡೆಗಾರ, ಮಂಜುನಾಥ ಧೂಳೆ, ಉಮೇಶ ಲಮಾಣಿ, ಎಸ್ ಬಿ ಗದ್ಯಾಳ, ಹಣಮಂತ ಅರವತ್ತು, ಬಸವರಾಜ ರಾವೂರ, ಸಂತೋಷ ಬೊರಗಿ ಸಂಜೀವ ಹೊಟಗಾರ ಕಾರ್ಯಕ್ರಮದಲ್ಲಿ ಇದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರ ಮಗಳು ನಡೆದವು. ಇದೇ ಸಂದರ್ಭದಲ್ಲಿ ಪುರಸಭೆ ಸದಸ್ಯರು ಸನ್ಮಾನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...