ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕರಿಸಿದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬೊಮ್ಮಾಯಿ‌

Date:

  • ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ
  • ಕೆಲವೊಮ್ಮೆ ಗಟ್ಟಿ ಧನಿಯಲ್ಲಿ ಹೇಳಿದ್ದರೂ ವಯಕ್ತಿಕ ಅಭಿಪ್ರಾಯ ಇರಲಿಲ್ಲ

ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಅಧಿಕಾರಿಗಳಿಗೆ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು.

“ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ‌” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು” ಎಂದು ಹೇಳಿದರು.

“ನಾವು ಐದು ವರ್ಷಕ್ಕೆ ಬರುವವರು, ನೀವು ಸುದೀರ್ಘ ಅಧಿಕಾರದಲ್ಲಿ ಇರುವವರು. ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧನಿಯಲ್ಲಿ ಹೇಳಿರಬಹುದು. ಆದರೆ ಯಾವುದೇ ವಯಕ್ತಿಕ ಅಭಿಪ್ರಾಯ ಇರಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಬಸವರಾಜ ಬೊಮ್ಮಾಯಿ‌

“ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್‌ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...