ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ಮೂಲಸೌಲಭ್ಯಗಳ ಹೆಚ್ಚಳ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್‌ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

- Advertisement -

ಬೆಂಗಳೂರು ನಗರದಲ್ಲಿ ವಿಶೇಷ ಸಭೆ ನಾಡೆಸಿ ಮಾತನಾಡಿ, “ಗುಣಮಟ್ಟದ ಕುಡಿಯುವ ನೀರು ಸರಬರಾಜು, ಸುಸ್ಥಿರ ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ನೀರು ಮರುಬಳಕೆ, ಘನತ್ಯಾಜ್ಯ ಬೇರ್ಪಡಿಸುವಿಕೆ ಹಾಗೂ ವಿಲೇವಾರಿ, ಉತ್ತಮ ಸಂಚಾರಿ ವ್ಯವಸ್ಥೆ, ಹಸಿರೀಕರಣ ಮುಂತಾದ ಮೂಲ ಸೌಲಭ್ಯಗಳನ್ನು ಕಲಬುರಗಿ ನಗರಕ್ಕೆ ಒದಗಿಸಲು ಯೋಜಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಲಬುರಗಿ ನಗರವನ್ನು ಅತ್ಯುತ್ತಮ ಮೂಲಭೂತ ಸೌಲಭ್ಯಗಳ ನಗರವಾಗಿಸುವ ಮೂಲಕ ಹೆಚ್ಚು ಉದ್ದಿಮೆಗಳನ್ನು ಆಕರ್ಷಿಸುವದರೊಂದಿಗೆ ಹೆಚ್ಚೆಚ್ಚು ಮಂದಿ ಯುವಕ ಯವತಿಯರಿಗೆ ಉದ್ಯೋಗ ಸೃಷ್ಟಿಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಪ್ರಿಯಾಂಕ್‌ ಖರ್ಗೆ ಸಭೆ 1

“ನಗರದ ನೈರ್ಮಲ್ಯ ವ್ಯವಸ್ಥೆಯನ್ನು ಸುಧಾರಿಸುವ ಅವಶ್ಯಕತೆ ಇದೆಯೆಂದು ಹೇಳಿದ ಸಚಿವರು ಈಗಿನ ಶೇ.50ರಷ್ಟಿರುವ ನೈರ್ಮಲ್ಯ ವ್ಯವಸ್ಥೆಯನ್ನು ನೂರಕ್ಕೆ ನೂರರಷ್ಟು ಬಲಪಡಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ. ಈ ಸಲುವಾಗಿ ನೈರ್ಮಲ್ಯ ನೌಕರರ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂಬ ಅಂಶವನ್ನು ವಿವರಿಸಿದರಲ್ಲದೆ, ನಗರದ ನೂರು ಲಕ್ಷ ಚದರ ಅಡಿ ಪ್ರದೇಶದಲ್ಲಿ ಉದ್ಯಾನ ಹಾಗೂ ಮರಗಳನ್ನು ಪೋಷಿಸುವುದರೊಂದಿಗೆ ಕಲಬುರಗಿ ನಗರವನ್ನು ಹಸಿರೀಕರಣಗೊಳಿಸುವ ಯೋಜನೆಯನ್ನು ರೂಪಿಸಲಾಗುವುದು” ಎಂದು ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

ಸಚಿವರ ಯೋಜನೆಗಳಿಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹ್ಯೂಮನ್‌ ಸೆಟಲ್‌ಮೆಂಟ್‌ ಸಂಸ್ಥೆಯು ಸಿದ್ಧಪಡಿಸಿದ್ದ ತಜ್ಞರನ್ನು ಒಳಗೊಂಡ ವರದಿಯನ್ನು ಸಚಿವರು ಮತ್ತು ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿತು.

ಸಭೆಯಲ್ಲಿ ಕಲಬುರಗಿ ಶಾಸಕ ಅಲ್ಲಮಪ್ರಭು ಪಾಟೀಲ್‌, ಶ್ರೀಮತಿ ಕನೀಜ್‌ ಫಾತೀಮಾ, ಕಲಬುರಗಿ ಮಹಾನಗರಪಾಲಿಕೆ ಮೇಯರ್‌ ಎಲ್ಲಪ್ಪ ನಾಯ್ಕೋಡಿ, ಕುಡಾ ಅಧ್ಯಕ್ಷ ಮಜರ್‌ ಆಲಂ ಖಾನ್‌, ಕಲಬುರಗಿ ಮಹಾನಗರಪಾಲಿಕೆ ಆಯುಕ್ತ ಅವಿನಾಶ್‌ ಸಿಂಧೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...