ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

Date:

Advertisements

ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ.

ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ ಘಟಪ್ರಭಾದ ಮೃತ್ಯುಂಜಯ ಸರ್ಕಲ್‌ನಲ್ಲಿ ಮಧ್ಯರಾತ್ರಿ ಮೆರವಣಿಗೆ ನಡೆಸಿದ್ದಾರೆ. ಮಹಿಳೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಹಿಳೆಯ ಮೇಲೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.

ಗ್ರಾಮದ ಶ್ರೀದೇವಿ ಥಳಿತಕ್ಕೊಳಗಾದ ಮಹಿಳೆ ಎಂದು ಹೇಳಲಾಗಿದೆ. ಆಕೆ ಯಲವು ಯುವಕರನ್ನು ಹನಿ ಟ್ರ್ಯಾಪ್‌ ಮಾಡಿ, ಹಣ ವಸೂಲಿ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಹಲವು ಮಂದಿ ಆಕೆಯ ಮನೆ ಬಳಿ ಹೋಗಿ ಪ್ರಶ್ನಿಸಿದ್ದಾರೆ. ಈ ವೇಳೆ, ಆಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

Advertisements

ಆಕೆಯ ನಿಂದನೆಯಿಂದ ಕೋಪಗೊಂಡು ಕೆಲವರು ಆಕೆಯನ್ನು ಮನೆಯಿಂದ ಹೊರಗೆದುಕೊಂಡು ಬಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯು ಪೊಲೀಸರ ವಶದಲ್ಲಿದ್ದಾರೆ. ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X