ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

Date:

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ, ಕೊರಟಗೆರೆ ತಾಲೂಕುಗಳಿಗೆ ಹೇಮಾವತಿ ನೀರು ಹರಿಯುತ್ತಿಲ್ಲ. ಈ ಎರಡು ತಾಲೂಕಿಗೆ ಹೇಮಾವತಿ ನೀರು ಕೊಡಲು ಅವಕಾಶವಿದ್ದರು ರಾಜ್ಯದ ಗೃಹ ಮಂತ್ರಿ ಪರಮೇಶ್ವರ್ ಅವರು ಹೇಮಾವತಿ ನೀರು ಕೊಡಿಸದೆ ಪಲಾಯನ ಮಾಡುತ್ತಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಆರೋಪಿಸಿದರು

- Advertisement -

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರೈತ  ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನೀರನ್ನು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಕುಣಿಗಲ್ ಹೆಸರೇಳಿಕೊಂಡು ಮಾಗಡಿ, ರಾಮನಗರ, ಬೆಂಗಳೂರಿಗೆ ನಮ್ಮ ಪಾಲಿನ ನೀರನ್ನು ಕದಿಯುತ್ತಿದ್ದಾರೆ. ಈಗಿದ್ದರು ಕಾಂಗ್ರೆಸ್ ಶಾಸಕರು ಮೌನ ವಹಿಸಿದ್ದಾರೆ. ಇವರಿಗೆ ಮತದಾರರ ಭಯ ಇಲ್ಲದಂತ್ತಾಗಿದೆ. ಮತದಾರರ ಭಯವಿಲ್ಲದೆ ಈ ರೀತಿ ಮಾಡುತ್ತಿದ್ದಾರೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...
1002072904

ಐಐಟಿ ಮೂಲಕ ಈ ಯೋಜನೆ ಬಗ್ಗೆ ಪರಿಶೀಲಿಸಲು ಶಾಸಕರ ಸಭೆಯಲ್ಲಿ ತಿಳಿಸಿದ ಉಪ ಮುಖ್ಯಮಂತ್ರಿಗಳು ಸ್ಥಳಕ್ಕೆ ಬಂದು ಕೆಲಸ ಈಗಾಗಲೇ 400 ಕೋಟಿ ಬಿಡುಗಡೆಯಾಗಿದೆ. ಕೆಲಸ ಮಾಡುತ್ತೇವೆ ಎಂದು ಉದ್ಧಟತನ ಮಾತುಗಳಾಡಿರುವುದು ಸರಿಯಲ್ಲ. ಜೊತೆಯಲ್ಲಿ ಬಂದು ಮೌನ ಸಮ್ಮತಿ ನೀಡಿದ ಶಾಸಕರಿಬ್ಬರ ನಡೆಗೆ ರೈತರಲ್ಲಿ ಆಕ್ರೋಶ ಮೂಡಿದೆ. ಮತ್ತೂಮ್ಮೆ ದೊಡ್ಡ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ಎಚ್ಚರಿಸಿದರು.

ಇತ್ತೀಚೆಗೆ ಗುಬ್ಬಿ ತಾಲೂಕಿನ ಸುಂಕಾಪುರದ ಬಳಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಕಾಮಗಾರಿ ನಿಲ್ಲಸುವುದಿಲ್ಲ, ಈಗಾಗಲೇ ಪೖಪ್ ಖರೀದಿಗೆ 400 ಕೋಟಿ ಹಣ ಮಂಜೂರು ಮಾಡಿದ್ದೇವೆ. ಸಹೋದರಂತೆ ನೀರು ಹಂಚಿಕೆ ಮಾಡಿಕೊಳ್ಳೋಣ ಎಂದು ಹೇಳಿದ್ದರು, ಈ ಹೇಳಿಕೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು, ಹಾಗೇ ಗುಬ್ಬಿಯಲ್ಲಿ ಸಭೆಯನ್ನು ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...