ತೆರಿಗೆ ಹಂಚಿಕೆ: ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯಕ್ಕೆ ಖಂಡನೆ; ಕೇಂದ್ರದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

Date:

ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎನ್ ಪ್ರತಾಪ್ ಸಿಂಹ ಹೇಳಿದ್ದಾರೆ.

- Advertisement -

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರಗಳನ್ನು ಬೆಂಬಲಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯಗಳು  ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಕೇಂದ್ರ ಸರ್ಕಾರ ಅಡ್ಡಿಪಡಿಸಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ತನ್ನ ಪನಸ್ಸಿಗೆ ತೋಚಿದಂತೆ ಅನುದಾನ ಹಂಚಿಕೆ ಮಾಡಿ, ರಾಜ್ಯಗಳು ಸಾಲ ಮಾಡುವಂತೆ ಮಾಡುತ್ತಿದೆ. ಇಂತಹ ಧೋರಣೆಯನ್ನು ನಿಲ್ಲಿಸಿ, ನ್ಯಾಯಯುತವಾಗಿ ತೆರಿಗೆ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ಇಟಿ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯ ಸರ್ಕಾರಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು. ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಬಿ.ಎನ್ ಮಂಜುನಾಥ್, ಚಂದ್ರತೇಜಸ್ವಿ, ಎನ್ ವೆಂಕಟಾಚಲಯ್ಯ, ಟಿ ಯಶವಂತ್, ವಿಮಲಾ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...