ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

Date:

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ‘ನನ್ನ ಕನಸು’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

- Advertisement -

ಯಾದಗಿರಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಜಿಲ್ಲೆಯ ನಾಲ್ವರನ್ನು ಒಳಗೊಂಡ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಗುತ್ತಿದೆ. ಅದರ ಭಾಗವಾಗಿ ಯರಗೋಳ ಶಾಲೆಗೆ ಆಗಮಿಸಿದ ಯುಪಿಎಸ್‌ಸಿ ಸಾಧಕ ಚಂದ್ರಶೇಖರ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಿದರು. ಅಲ್ಲದೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿಧಾನ, ಅಧ್ಯಯನದ ಕ್ರಮ ಹಾಗೂ ಗುರಿ ಸಾಧನೆಗೆ ಅಗತ್ಯವಾದ ಪರಿಶ್ರಮದ ಕುರಿತು ಮಾರ್ಗದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶ್ ಸಜ್ಜನ್, “ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ತಾವು ಏನಾಗಬೇಕು ಎಂಬ ಕನಸು ಕಾಣಬೇಕು. ಕನಸಿನಂತೆ ನಿರಂತರ ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ದೊರೆಯುತ್ತದೆ” ಎಂದು ಹೇಳಿದರು.

Advertisements
3575508

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಬಾಬು ಚವ್ಹಾಣ ಮಾತನಾಡಿ, “ಒಂದು ಗಿಡಕ್ಕೆ ನೀರು ಹಾಕಿ ಪೋಷಿಸಿದರೆ ಅದು ಹೆಮ್ಮರವಾಗಿ ಬೆಳೆದು ಎಲ್ಲರಿಗೂ ನೆರಳು ನೀಡುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಈಗಿನಿಂದಲೇ ಕನಸು ಕಂಡು, ಸಾಧಕರನ್ನು ಪ್ರೇರಣೆಯಾಗಿ ಪಡೆದು ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು. ಮುಂದೆ ನೀವು ಸಾಧನೆ ಮಾಡಿದಾಗ ನಿಮ್ಮ ತಂದೆ-ತಾಯಿ ಹಾಗೂ ಶಿಕ್ಷಕರಿಗೆ ಗೌರವ ತಂದುಕೊಡುವುದರ ಜೊತೆಗೆ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದಂತಾಗುತ್ತದೆ” ಎಂದು ತಿಳಿಸಿದರು.

ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ‘ನನ್ನ ಕನಸು’ ಕಾರ್ಡ್‌ಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ತಾವು ಭವಿಷ್ಯದಲ್ಲಿ ಏನಾಗಬೇಕೆಂಬ ಕನಸನ್ನು ಕಾರ್ಡ್‌ನಲ್ಲಿ ಬರೆದು ಇಲಾಖೆಗೆ ಸಲ್ಲಿಸಬೇಕು. ಈ ಕನಸುಗಳಿಗೆ ಸಂಬಂಧಿಸಿದಂತೆ ಇಲಾಖೆಯಿಂದ ಮಾರ್ಗದರ್ಶನ ಹಾಗೂ ಉತ್ತರ ನೀಡಲಾಗುತ್ತದೆ ಎಂದು ತಿಳಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಚನ್ನಬಸಪ್ಪ ಜೋಗಿ, ಶಿಕ್ಷಣ ಪ್ರೇಮಿಗಳು ಹಾಗೂ ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭೀಮಶಂಕರ ಎಂ. ಯರಗೋಳ, ತಮ್ಮಣ್ಣ ಎಪಿಎಫ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ನ.7ರಂದು ಸಾಲಿಡಾರಿಟಿ ಸಮಾವೇಶ

ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ...

ಚಿಂತಾಮಣಿ ನಗರದ ಭವಿಷ್ಯ ಬದಲು ಮಾಡಲಿದೆ 850 ಎಕರೆ ಟೌನ್‌ಶಿಪ್ ಯೋಜನೆ!

ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ನಗರಾಭಿವೃದ್ಧಿ ಚಿಂತಾಮಣಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ...

ಉಡುಪಿ | ಅಲ್ ಫಲಾಹ್ ಮಸೀದಿ ಉದ್ಘಾಟನೆ; ಸರ್ವಧರ್ಮೀಯರ ಸಂಗಮಕ್ಕೆ ಸಾಕ್ಷಿಯಾದ ಗೋಳಿಕಟ್ಟೆ

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,...

ಉಡುಪಿ | ಮೋದಿ–ಅಮಿತ್ ಶಾ ಸರ್ಕಾರದ ಅಂತ್ಯ ಸಮೀಪಿಸುತ್ತಿದೆ: ಲಕ್ಷ್ಮೀಶ ಗಬ್ಬಲಡ್ಕ

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ಉದ್ದೇಶದಿಂದ...