ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ.11 ರಿಂದ ಏ.28ರ ವರೆಗೆ ಭಾನುವಾರ ಹೊರತುಪಡಿಸಿ 41 ದಿನ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಧ್ಯಾಹ್ನ ಬಿಸಿಯೂಟವನ್ನು ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸೇರಿದಂತೆ ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಬೇಕು ಎಂದು ಸೋಮವಾರ ನಿರ್ದೇಶನ ನೀಡಿದ್ದಾರೆ.
ಏ.11 ರಿಂದ ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಲಿದ್ದು, ಅಂದಿನಿಂದಲೇ ರಜೆ ಬಿಸಿಯೂಟ ಆರಂಭವಾಗಬೇಕು. ಶಾಲೆಯ ಆಯ್ಕೆ ಮತ್ತು ಗ್ರಾಮವು ಕೇಂದ್ರ ಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಹೆಚ್ಚು ಮಕ್ಕಳಿರುವ ಶಾಲೆಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಿರುವ ಶಾಲೆಯಲ್ಲಿ ಹೆಚ್ಚುವರಿ ಶಾಲೆ ಇರುವ ಮಕ್ಕಳು ಸಹ ಬಂದು ಊಟ ಮಾಡಬಹುದು. 250ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ನಿರ್ವಹಣೆಗೆ ಹೆಚ್ಚುವರಿ ಶಿಕ್ಷಕರನ್ನು ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಿಸಬೇಕೆಂದು ತಿಳಿಸಿದ್ದಾರೆ.
ಬಿಸಿಯೂಟ ನಿರ್ವಹಣೆ ಹಾಗೂ ವಿತರಣೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆ ಮುಖ್ಯ ಶಿಕ್ಷಕರ ಮೇಲಿದೆ, ಅಗತ್ಯವಿದ್ದಲ್ಲಿ ನೋಡಲ್ ಶಿಕ್ಷಕರನ್ನು ನೇಮಿಸಿಕೊಳ್ಳವಬೇಕು. ಮಕ್ಕಳ ಸಂಖ್ಯೆ ಹೆಚ್ಚಿದ್ದಲ್ಲಿ ಪಕ್ಕದ ಶಾಲೆಯನ ಅಡುಗೆ ಸಿಬ್ಬಂದಿಗಳ ಸೇವೆ ಬಳಸಿಕೊಳ್ಳಬಹುದಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಬಿಸಿಯೂಟ ಮಾಡಲು ಕಳುಹಿಸುತ್ತಾರೆ ಅವರಿಂದ ಒಪ್ಪಿಗೆ ಪತ್ರ ಸಂಗ್ರಹಿಸಬೇಕು. ರಜೆಯಲ್ಲಿ ಬಂದು ಊಟ ಮಾಡುವ ವಿದ್ಯಾರ್ಥಿಗಳ ವಿವರವನ್ನು ಸಂಗ್ರಹಿಸಬೇಕು. ಆದರಂತೆ ಮಕ್ಕಳಿಗೆ ಮಾತ್ರ ಈ ಹಿಂದಿನ ಮೆನುವಿನಂತೆ ಊಟ ತಯಾರು ಮಾಡಿ ರಜಾ ದಿನ ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ ಬಿಸಿಯೂಟ ವಿತರಿಸಲು ಸೂಚಿಸಿದ್ದಾರೆ.
ಬೀದರ ಜಿಲ್ಲೆಯ ರಜಾ ದಿನಗಳಲ್ಲಿ ಬಿಸಿಯೂಟದ ವಿವರ :
ಬೇಸಿಗೆ ರಜಾ ಅವಧಿಯಲ್ಲಿ ಮಧ್ಯಾಹ್ನ ಬಿಸಿಯೂಟಕ್ಕೆ ಗುರುತಿಸಲ್ಪಟ್ಟ ಕೇಂದ್ರ ಶಾಲೆಗಳ ಸಂಖ್ಯೆ 1,143 ಇದೆ. ಟ್ಯಾಗ್ ಮಾಡಲಾದ ಶಾಲೆಗಳ ಸಂಖ್ಯೆ 561 ಇದೆ. ಗುರುತಿಸಲ್ಪಟ್ಟ ಕೇಂದ್ರ ಶಾಲೆಗಳ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು 1,06,432 ಮಕ್ಕಳಿದ್ದಾರೆ. ಒಪ್ಪಿಗೆ ಸೂಚಿಸಿದ ಮುಖ್ಯ ಗುರುಗಳು ಮತ್ತು ನೋಡಲ್ ಶಿಕ್ಷಕರ ಸಂಖ್ಯೆ 1,317 ಹಾಗೂ 2,338 ಅಡುಗೆ ಸಿಬ್ಬಂದಿಗಳಿದ್ದಾರೆ. ಕೇಂದ್ರ ಶಾಲೆಯ ಮುಖ್ಯ ಗುರುಗಳು ಎಸ್.ಎ.ಟಿ.ಎಸ್ ಮತ್ತು ಎ.ಎಂ.ಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸಬೇಕೆಂದು ಜಿ.ಪಂ.ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.