ಯಾದಗಿರಿ | ಅಂಬೇಡ್ಕರ್‌ಗೆ ಅಪಮಾನ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹ

Date:


ವಡಗೇರಾ : ಕೇಂದ್ರ ಸಚಿವ ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಜಂಟಿ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ವಡಗೇರಾ ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರ್ನಾಟಕ ರಾಜ್ಯ ರೈತ ಸಂಘ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ನಾಗರತ್ನಮ್ಮ ಪಾಟೀಲ್ ಮಾತನಾಡಿ, ʼರಾಜ್ಯಸಭೆಯಲ್ಲಿ ಸಚಿವ ಅಮಿತ್ ಷಾ ಅವರು ಡಾ.ಅಂಬೇಡ್ಕರ್ ಬಗ್ಗೆ ಕೀಳಾಗಿ ಮಾತನಾಡಿದ್ದು ಖಂಡನೀಯವಾಗಿದೆ. ದೇಶದ ಅಸಂಖ್ಯಾತ ಜನರ ಬದುಕಿಗೆ ಬೆಳಕಾದ ಬಾಬಾ ಸಾಹೇಬ್‌ ಅವರನ್ನು ಅಪಮಾನ ಮಾಡಿದ್ದು ಸಹಿಸುವುದಿಲ್ಲ. ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ದೇಶದ ಜನತೆಗೆ ಕ್ಷಮೆಯಾಚಿಸಬೇಕುʼ ಎಂದು ಆಗ್ರಹಿಸಿದರು.

ಸಾಹಿತಿ ಸಿದ್ದಣ್ಣ ಪೂಜಾರಿ ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಹಿಂದೆ ಕಾಂಗ್ರೆಸ್ ಪಕ್ಷದವರು ಅಪಮಾನಿಸಿದ್ದರು. ಇದೀಗ ಬಿಜೆಪಿ ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುತ್ತಿದೆ. ಈ ಪಕ್ಷಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸುವುದೇ ಫ್ಯಾಷನ್ ಆಗಿದೆ. ವಿಶ್ವವೇ ಅಂಬೇಡ್ಕರ್‌ ಅವರನ್ನು ಸ್ಮರಿಸುತ್ತದೆ. ಆದರೆ ದೇಶದಲ್ಲಿ ಅಂಬೇಡ್ಕರ್ ಆದರ್ಶಗಳನ್ನು ಒಪ್ಪಿಕೊಳ್ಳದ ಮನಸ್ಥಿತಿಯವರು ನಿರಂತರವಾಗಿ ಅವಮಾನ ಮಾಡುತ್ತಿದ್ದಾರೆ. ಇಂತ ಜನಪ್ರತಿನಿಧಿಗಳಿಂದ ದೇಶದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಅಮಿತ್‌ ಶಾ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದರೂ ಯಾವುದೇ ಕ್ರಮ ಜರುಗಿಸದೇ ಇರುವುದು ಖಂಡನೀಯವಾಗಿದೆ. ತಕ್ಷಣವೇ ಅವರನ್ನು ಸಂಪುಟದಿಂದ ವಜಾಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹೊಟ್ಟೆಯಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ತಾಯಿಯೂ ಮರಣ

ಈ ಸಂದರ್ಭದಲ್ಲಿ ಪ್ರಮುಖರಾದ ಡಾ.ಘಾಳೆಪ್ಪ ಪೂಜಾರಿ, ರಂಗನಾಥ ಬಾಗ್ಲಿ, ನಿಂಗಣ್ಣ ಕರಡಿ, ಮಲ್ಲಣ್ಣ ನೀಲಹಳ್ಳಿ, ಶರಣು ವಡಗೇರಾ, ಸಿದ್ದಣ್ಣ ಹುಬ್ಬಳ್ಳಿ, ಬಾಲಪ್ಪ ಪೂಜಾರಿ ಸೇರಿದಂತೆ ದಲಿತ ಹಾಗೂ ರೈತಪರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...