ಬೀದರ್‌ | ಅಂಬೇಡ್ಕರ್‌ಗೆ ಅಪಮಾನ : ಕಲ್ಯಾಣದಲ್ಲಿ ಅಮಿತ್‌ ಶಾ ವಿರುದ್ಧ ಸಿಡಿದ ಆಕ್ರೋಶ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಸೋಮವಾರ ಹಮ್ಮಿಕೊಂಡಿದ್ದ ಬಸವಕಲ್ಯಾಣ ಬಂದ್‌ ಚಳವಳಿಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಸಾಥ್‌ ನೀಡಿದವು.

- Advertisement -

ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ಬೆಳಿಗ್ಗೆಯಿಂದ ಕೆಲ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ , ಮುಂಗಟ್ಟು ಮುಚ್ಚುವುದರ ಮೂಲಕ ಪ್ರತಿಭಟನೆಗೆ ಬೆಂಬಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2024 12 23 at 7.34.05 PM

ನಗರದ ಕೋಟೆಯಿಂದ ಆರಂಭವಾದ ಮೆರವಣಿಗೆ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು. ಕೇಂದ್ರ ಸರ್ಕಾರ, ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ನಂತರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್‌ ಜೈನ್‌ ಅವರಿಗೆ ಸಲ್ಲಿಸಿದರು.

ʼರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಕೆಲವರಿಗೆ ಫ್ಯಾಷನ್ ಆಗಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತುʼ ಎಂಬ ಆಕ್ಷೇಪಾರ್ಹವಾಗಿ ಮಾತನಾಡಿ ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾರೆ. ಇದರಿಂದ ದೇಶದ ಜನರ ಭಾವನೆಗೆ ದಕ್ಕೆ ತಂದಿದ್ದಾರೆ. ತಕ್ಷಣವೇ ಸಂಪುಟದಿಂದ ಅವರನ್ನು ವಜಾಗೊಳಿಸಬೇಕುʼ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ ಸಿಂಗ್‌ ಮಾತನಾಡಿ, ʼಸಂಸತ್ತಿನಲ್ಲಿ ಬಾಬಾ ಸಾಹೇಬ್‌ ಅವರ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಆಡಿದ ಮಾತುಗಳು ಖಂಡನೀಯವಾಗಿವೆ. ಸಂವಿಧಾನದಿಂದಲೇ ಗೃಹ ಮಂತ್ರಿಯಾದ ಅಮಿತ್ ಶಾ‌ ಅವರು ಡಾ.ಬಾಬಾ ಸಾಹೇಬ್‌ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

WhatsApp Image 2024 12 23 at 7.38.17 PM 1

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಾಲಾ ಬಿ.ನಾರಾಯಣ ಮಾತನಾಡಿ, ಶತಮಾನಗಳಿಂದ ಇದ್ದ ಜಾತಿ ವರ್ಣ ವ್ಯವಸ್ಥೆ ದಾಸ್ಯದ ಸಂಕೋಲೆಯಿಂದ ಬಿಡುಗಡೆಗೊಳಿಸಿದ ಬಾಬಾ ಸಾಹೇಬ್ ಅಂಬೇಡ್ಕರ್, ಇಂದು ದೇಶ ಸ್ವಾಭಿಮಾನದಿಂದ ತಲೆಯೆತ್ತಿ ನಡೆಯುತ್ತಿದ್ದರೆ ಅದಕ್ಕೆ ಬಾಬಾ ಸಾಹೇಬರ ಹೋರಾಟವೇ ಕಾರಣ. ಶೋಷಿತ, ತಳಸಮುದಾಯದಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಅಂಬೇಡ್ಕರ್‌ ಅವರಿಗೆ ಅಮಿತ್‌ ಶಾ ಅವಮಾನಿಸಿದ್ದು ತೀವ್ರವಾಗಿ ಖಂಡಿಸುತ್ತೇನೆʼ ಎಂದರು.

ಈ ಸುದ್ದಿ ಓದಿದ್ದೀರಾ? ಸಿ.ಟಿ. ರವಿ ಮಹಿಳಾ ನಿಂದಕ ಪ್ರಕರಣ ಮುಂದೇನಾಗಲಿದೆ?

ಪ್ರತಿಭಟನೆಯಲ್ಲಿ ಮುಖಂಡ ಧನರಾಜ್‌ ತಾಳಂಪಳ್ಳಿ, ಸುರೇಶ ಮೋರೆ, ಪಿಂಟು ಕಾಂಬಳೆ, ಸಂದೀಪ ಮುಕಿಂದೆ, ಚೇತನ್‌ ಕಾಡೆ, ಶಂಕರ್‌ ಫುಲೆ, ಶಂಕರ್ ಫುಲೆ, ಮಹಾದೇವ ಗಾಯಕವಾಡ, ವಾಮನ ಮೈಸಲ್ಗೆ, ವಿಜಯಕುಮಾರ್ ಡಾಂಗೆ, ಜೈಭೀಮ್ ಕೊಳೆ, ಸಾಗರ್, ಪ್ರಫುಲ್ ಗಾಯಕವಾಡ, ಅಭಿಜಿತ್ ಸೂರ್ಯವಂಶಿ, ಶ್ರೀಕಾಂತ್ ಕಾಂಬಳೆ, ಗೌತಮ್ ಜಾಂತೆ, ಸವಿತಾ ಕಾಂಬಳೆ, ಇಕ್ರಾಮ್‌ ಖಾದಿವಾಲೆ, ಮಿಲಿಂದ್‌ ಸಾಗರ್‌, ನಿತಿನ್‌ ಡಾಂಗೆ, ಚಂದ್ರಕಾಂತ ವಾಘಮಾರೆ, ತಹೇರ್‌ ಭಾಯ್‌, ನವಾಜ್‌ ಖುರೇಸಿ, ಮನೋಹರ ಮೈಸೆ, ವಿಲಾಸ ನಾಟೇಕರ್‌ ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಜನರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...