ಬೀದರ್‌ | ಬಸವಣ್ಣ ಪ್ರತಿಮೆಗೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ಸಂಚಾರ ಸ್ಥಗಿತ

Date:

ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್‌ ಬಳಿಯ ಇರುವ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಭಾಲ್ಕಿ-ಹುಮನಾಬಾದ್ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.

- Advertisement -

ಕೆಲವು ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ ಕೈ ಮುರಿದು ಅವಮಾನಿಸಿ, ಧ್ಜಜ ಕಂಬ ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಘಟನೆ ಮಂಗಳವಾರ ರಾತ್ರಿ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿದ್ದು, ಬೆಳಿಗ್ಗೆ ಗಮನಿಸಿದ ಗ್ರಾಮಸ್ಥರು, ಸಾರ್ವಜನಿಕರು ಕಿಡಿಗೇಡಿಗಳ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2025 01 15 at 9.32.17 AM

ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಸಾರ್ವಜನಿಕರು ಬಸವಣ್ಣನವರ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ವಾಹನ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ ಬಸವಕಲ್ಯಾಣ, ಹುಮನಾಬಾದ್‌ ಕಡೆ ತೆರಳುವ ಸಾರಿಗೆ ಬಸ್‌ ಸೇರಿದಂತೆ ಇತರೆ ವಾಹನಗಳು ದಾಡಗಿ ಕ್ರಾಸ್‌ ಬಳಿ ಭಾರೀ ಪ್ರಮಾಣದಲ್ಲಿ ಜಮಾಯಿಸಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಸ್ಥಳೀಯರು ಈದಿನ.ಕಾಮ್‌ ಗೆ ಮಾಹಿತಿ ನೀಡಿದ್ದಾರೆ.

ʼಈ ಘಟನೆ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ಶಂಕೆ ಇದೆ, ಆರೋಪಿಗಳು ಯಾರು ಅಂತ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಘಟನಾ ಸ್ಥಳದಲ್ಲಿ ಇದ್ದು, ಮಾಹಿತಿ ಕಲೆ ಹಾಕುತ್ತಿದ್ದೇವೆʼ ಎಂದು ಖಟಕ ಚಿಂಚೋಳಿ ಠಾಣೆಯ ಪಿಎಸ್‌ಐ ಈದಿನ.ಕಾಮ್‌ ಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...