ಬೀದರ್‌ | ಬಸವಣ್ಣನವರ ಪ್ರತಿಮೆಗೆ ಅಪಮಾನ ವಿಚಾರ : ಬೀದರ್‌ ಎಸ್ಪಿ ಹೇಳಿದ್ದೇನು?

Date:

ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಡಗಿ ಕ್ರಾಸ್ ಹತ್ತಿರದ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ನಡೆದಿರುವ ವಿಚಾರವಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸ್ಪಷ್ಟನೆ ನೀಡಿದ್ದಾರೆ.

- Advertisement -

ಬಸವಣ್ಣನವರ ಪುತ್ಥಳಿ ಹಾನಿಯಾಗಿದ್ದ ಬಗ್ಗೆ ಭಾಲ್ಕಿ ತಹಶೀಲ್ದಾರ್ ಮಲ್ಲಿಕಾರ್ಜುನ್‌ ವಡ್ಡನಕೇರಿ ಮತ್ತು ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅವರು ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಸ್ಥಳದಲ್ಲಿದ್ದ ಜನರ ಸಮಕ್ಷಮ ಪರಿಶೀಲಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಬಸವಣ್ಣನವರ ಪುತ್ಥಳಿಗೆ ಕಬ್ಬು ತುಂಬಿದ ಲಾರಿ ತಗುಲಿ ಈ ಹಾನಿಯಾದ ಬಗ್ಗೆ, ಅಲ್ಲಿಯ ಕಬ್ಬು ಸವರಿದ ಗುರುತು, ಕಬ್ಬಿನ ರಸದ ಕಲೆ ಮತ್ತು ಮುರಿದಿರುವ ಬಲಿಷ್ಠ ರಾಡ್ ನೋಡಿದಾಗ ಮೇಲ್ನೋಟಕ್ಕೆ ಕಾಣುತ್ತಿದ್ದು, ಆದರೂ ಸಹ ಕೂಲಂಕುಷವಾಗಿ ತನಿಖೆ ನಡೆಸಿ ಯಾರಾದರೂ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿರುವ ಸಂಭವವಿದ್ದರೆ ಅವರ ಮೇಲೆ ತನಿಖೆ ನಡೆಸಿ, ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಬುಧವಾರ ಮಧ್ಯಾಹ್ನ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು

ಬಸವಣ್ಣನವರಿಗೆ ಅಪಮಾನ ಮಾಡಿದ ಘಟನೆ ಖಂಡಿಸಿ ಬುಧವಾರ ಬೆಳಿಗ್ಗೆ ಸುಮಾರು ಎರಡು ಘಟನೆಗಳ ಕಾಲ ಗ್ರಾಮಸ್ಥರು ದಾಡಗಿ ಕ್ರಾಸ್‌ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಬಳಿಕ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘಟನೆ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...