ದಕ್ಷಿಣ ಕನ್ನಡ | ರಾಷ್ಟ ಧ್ವಜಕ್ಕೆ ಅಪಮಾನ; ಶ್ರೀನಿವಾಸ್ ಕಾಲೇಜು ವಿರುದ್ಧ ಕ್ರಮಕ್ಕೆ ಆಗ್ರಹ

Date:

ರಾಷ್ಟ್ರ ಧ್ವಜಕ್ಕೆ ಮಂಗಳೂರಿನ ಶ್ರೀನಿವಾಸ್ ಕಾಲೇಜಿನಲ್ಲಿ ಅಪಮಾನ ಮಾಡಲಾಗಿದೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್‌ಐ ಒತ್ತಾಯಿಸಿದೆ.

ಕಾಲೇಜಿನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟಣೆ ನೀಡಿದ್ದಾರೆ. “ಜ.22ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಉದ್ಘಾಟನಾ ಸಮಾರಂಭದ ಸಂಧರ್ಭಯಲ್ಲಿ ಕಾಲೇಜಿನಲ್ಲಿ ದೇಶದ ರಾಷ್ಟ್ರ ಧ್ವಜ ಹಾರಿಸಲು ಮೀಸಲಿಟ್ಟ ರಾಷ್ಟ್ರ ಲಾಂಛನವಿರುವ ಧ್ವಜಸ್ತಂಭದಲ್ಲಿ ಒಂದು ಮತಕ್ಕೆ ಸೀಮಿತವಾದ ಕೇಸರಿ ಬಾವುಟ ಹಾರಿಸಲಾಗಿದೆ. ಇದು ರಾಷ್ಟ್ರಧ್ವಜ್ಯಕ್ಕೆ ಮಾಡಿದ ಅಪಮಾನವಾಗಿದೆ” ಎಂದು ಡಿವೈಎಫ್‌ಐ ಕಿಡಿಕಾರಿದ್ದಾರೆ.

“ರಾಷ್ಟ್ರ ಲಾಂಛನ ಮತ್ತು ರಾಷ್ಟ್ರ ಧ್ವಜಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಆದರೆ, ರಾಷ್ಟ್ರ ಲಾಂಛನವಿರುವ ಧ್ವಜ ಸ್ಥಂಭದಲ್ಲಿ ಕೇಸರಿ ಬಾವುಟ ಹಾರಿಸಿರುವುದು ದೇಶ ವಿರೋಧಿ ಕೃತ್ಯವಾಗಿರುತ್ತದೆ” ಎಂದು ಸಂಘಟನೆ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಷ್ಟ್ರ ಧ್ವಜ ಹಾರಿಸುವ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ದೇಶ ವಿರೋಧಿ ಕೃತ್ಯ ಎಸಗಲು ಕಿಡಿಗೇಡಿಗಳಿಗೆ ಪ್ರೇರಣೆ ನೀಡಿದ ಶ್ರೀನಿವಾಸ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೊಲೀಸ್ ಇಲಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಹಬಾಳ್ವೆ ಕುರಿತು ಜಾಗೃತಿ ಮೂಡಿಸಬೇಕಿದ್ದ ಕಾಲೇಜಿನಲ್ಲಿ ಧರ್ಮಾಂಧತೆ, ಮತೀಯತೆಗೆ ಬೆಂಬಲ ಕೊಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದೆ.

 

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...