ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನ; ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

Date:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಮೋಟಮ್ಮ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಭಟ್‌ ವಿರುದ್ಧ ಉತ್ತರ ಕನ್ನಡ ಕಾಂಗ್ರೆಸ್‌ ಮುಖಂಡ, ವಕೀಲ ಮಂಜುನಾಥ ನಾಯಕ್ ಅವರು ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಕಲಿಸಿದ್ದಾರೆ.

- Advertisement -

ಆಗಸ್ಟ್‌ 20ರಂದು ಫೇಸ್‌ಬುಕ್‌ನಲ್ಲಿ ವಿಶ್ವೇಶ್ವರ ಭಟ್ ಮಹಿಳಾ ವಿರೋಧಿ ಮತ್ತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದರು. ಪೋಸ್ಟ್‌ನಲ್ಲಿ ಹಾಲಿವುಡ್‌ ನಟಿ ಮರ್ಲಿನ್‌ ಮೆನ್ರೋ ಹೇಳಿಯೊಂದನ್ನು ಉಲ್ಲೇಖಿಸಿ , “ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೊಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು. ಕೆಲ ದಿನಗಳ ಬಳಿಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ‌, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ? ಒಮ್ಮೆ ಯೋಚಿಸಿ” ಎಂದು ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...
ಭಟ್ಟ1

“ಭಟ್‌ ಅವರ ಅಸಹ್ಯ ಹೇಳಿಕೆಗಳು ಬಾಲಿಷವಾಗಿದ್ದು, ಮಹಿಳೆಯರಿಗೆ ಅಪಮಾನ, ಅಪಹಾಸ್ಯ ಮಾಡಿವೆ. ಆತ ಮಹಿಳೆಯರ ದೇಹ, ಉಡುಗೆ-ತೊಡುಗೆಗಳ ಬಗ್ಗೆ ವ್ಯಂಗ್ಯ ಮಾಡಿದ್ದು, ಅವರ ಘಟನೆಗೆ ಧಕ್ಕೆ ತರುವಂತಿವೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹರಡುತ್ತದೆ. ಹಾಗಾಗಿ, ಭಟಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಮಂಜನಾಥ್ ನಾಯಕ್ ದೂರಿನಲ್ಲಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...