ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ: ಕ್ರೀಡಾಪಟು ಅಂಜು ಬಾಬಿ‌ ಜಾರ್ಜ್

Date:

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ.‌ ಕ್ರೀಡೆ ಸೇರಿದಂತೆ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕಾಲಿಡುತ್ತಿದ್ದಾರೆ. ಇದು ಆಶಾದಾಯಕ ಬೆಳೆವಣಿಗೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತೆ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ತಿಳಿಸಿದರು.

- Advertisement -

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ದಕ್ಷಿಣ ಪ್ರದೇಶ-II ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಎರಡು ದಿನಗಳ ಅಂತರ-ಪ್ರಾದೇಶಿಕ ಅಥ್ಲೆಟಿಕ್ಸ್ ಕೂಟ 2025 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪವರ್ ಗ್ರಿಡ್ ಸಂಸ್ಥೆಯ ವಿವಿಧ 11 ಪ್ರದೇಶಗಳ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಒಟ್ಟುಗೂಡಿಸಿ, ನೌಕರರಲ್ಲಿ ಸೌಹಾರ್ದತೆ, ಕ್ರೀಡಾ ಮನೋಭಾವ ಮತ್ತು ಆರೋಗ್ಯಕರ ಸ್ಪರ್ಧೆಯ ಮನೋಭಾವವನ್ನು ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆ. ಕ್ರೀಡೆಯಲ್ಲಿ ಸೋಲು-ಗೆಲುವು ಇದ್ದದ್ದೇ. ಸೋಲನ್ನೇ ಸವಾಲಾಗಿ ಸ್ವೀಕರಿಸಿ ಉನ್ನತ ಸ್ಥಾನಕ್ಕೆ ಏರಬೇಕು. ವೃತ್ತಿಪರ ಜೀವನದಲ್ಲಿ ಕ್ರೀಡೆಗಳನ್ನು ಸಂಯೋಜಿಸುವುದು ಕೂಡ ಮಹತ್ವವಾದುದು ಎಂದು ಅಂಜು ಬಾಬಿ ಜಾರ್ಜ್ ಹೇಳಿದರು.

1002436738

ಶಾಂತಿಯ ಸಂಕೇತವಾಗಿ ಕಾರ್ಯಕ್ರಮದಲ್ಲಿ ಪಾರಿವಾಳವನ್ನು ಹಾರಿಬಿಡಲಾಯಿತು. ಸಿಆರ್‌ಪಿಎಫ್ ಬ್ಯಾಂಡ್ ತಂಡದಿಂದ ಆಕರ್ಷಕ ಬ್ಯಾಂಡ್ ಪ್ರದರ್ಶನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ SR-II ನ ಪ್ರಭಾರ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಹೆಜಿಬ್, ರಮೇಶ್ ಬೇಬಿ, ಸಿಎಂ ಸೀನಿಯರ್ ಜಿಎಂ (ಎಫ್ & ಎ) ಟಾಫರ್ ಮೆಂಡೆಜ್, ಸಿಎಂ ಜಿಎಂ (ಎಚ್‌ಆರ್) ಅನ್ಶುಲಾ ಒಮೆಗಾ ಸಿಂಗ್, ಸಾರ್ವಜನಿಕ ಸಂಪರ್ಕಾಧಿಕಾರಿ – ಅಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಗರ್ ಉದ್ಘಾಟನಾ ಸಮಾರಂಭವನ್ನು ನಿರೂಪಿಸಿದರು.

1002436730

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಗ್ರ ಅಭಿವೃದ್ಧಿ ಮತ್ತು ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುವುದಕ್ಕಾಗಿ ಪವರ್ ಗ್ರಿಡ್ ಸಂಸ್ಥೆಯಿಂದ ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.

1002436957
1002436822
1002436825
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...