ಒಳಮೀಸಲಾತಿ ಪಾದಯಾತ್ರೆ | ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೊಟ್ಟ ಮಾತು ಉಳಿಸಿಕೊಳ್ಳಿ

Date:

 ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಕಾರಿ  ಪಾದಯಾತ್ರೆಯನ್ನು ಭಾನುವಾರ ತುಮಕೂರು ನಗರಕ್ಕೆ  ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.

- Advertisement -

ಈ ವೇಳೆ ಬಿಜಿಎಸ್ ವೃತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ  ಪಾದಯಾತ್ರೆಯ ನೇತೃತ್ವ ವಹಿಸಿರುವ ಭಾಸ್ಕರ್ ಪ್ರಸಾದ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಗಳಲ್ಲಿ ಮಾದಿಗ ಸಮುದಾಯದವರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1001179855

ನಮ್ಮದು ನ್ಯಾಯುತ ಹೋರಾಟ, ಯಾರ ಹಕ್ಕನ್ನೂ ಕಸಿಯುವ ಉದ್ದೇಶವಲ್ಲ, ನಮ್ಮ ಹಕ್ಕು ಪಡೆಯುವ ಹೋರಾಟ. ಸುಪ್ರೀಂ ಕೊರ್ಟ್ ಒಳಮೀಸಲಾತಿ ಜಾರಿ ಮಾಡಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡದೆ ಆಯೋಗ ರಚಿಸಿ ಅನಗತ್ಯ ವಿಳಂಬ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ಸಲುವಾಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ   ಎಂದು ಭಾಸ್ಕರ್ ಪ್ರಸಾದ್ ತಿಳಿಸಿದರು.

ಪರಿಶಿಷ್ಟ ಜಾತಿಯಲ್ಲಿ ಮಾದಿಗ ಸಮುದಾಯಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಸರ್ಕಾರ ಸುಳ್ಳು ಆಶ್ವಾಸನೆ ನೀಡಿ ದಲಿತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದೆ. ಸಮುದಾಯ ಒಗ್ಗಟ್ಟಾಗಿದೆ. ಹೋರಾಟ ತೀವ್ರವಾಗಿದೆ. ಸರ್ಕಾರಕ್ಕೆ ಬದ್ಧತೆಯಿದ್ದರೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

1001179858

ಹೈ ಕೋರ್ಟ್ ನ್ಯಾಯವಾದಿ ಅರುಣ್‌ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ, ಒಳಮೀಸಲಾತಿ ವಿರೋಧಿ. ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದಿದ್ದರೆ ಒಳಮೀಸಲಾತಿ ಜಾರಿಗೆ ಪ್ರಯತ್ನ ಮಾಡುತ್ತಿದ್ದರು. ಆದರೆ ಜಾರಿ ಮಾಡಲು ನೆಪ ಹೇಳಿಕೊಂಡು ಮೀನಾಮೇಷ ಎಣಿಸುತ್ತಿರುವುದನ್ನು ಸಹಿಸಲಾಗುವುದಿಲ್ಲ ಎಂದರು.

 ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಒಳಮೀಸಲಾತಿ ಹೋರಾಟ ಇಂದು ನಿನ್ನೆಯದಲ್ಲ. ಹಲವಾರು ವರ್ಷಗಳಿಂದ ನಡೆಯುತ್ತಿದೆ. ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಆಯಾ ಸರ್ಕಾರಗಳಿಗೆ ಅವಕಾಶವಿದೆ ಎಂದು ಉಚ್ಛ ನ್ಯಾಯಾಲಯವೇ ತಿಳಿಸಿದೆ, ಆದರೂ ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಒಳಮೀಸಲಾತಿ ಜಾರಿ ಮಾಡಲು ಮನಸಿಲ್ಲ, ಅಧಿಕಾರದಲ್ಲಿರುವವವರಿಗೆ ಮಾದಿಗ ಸುಮುದಾಯದ ಸಂಕಷ್ಟಗಳ ಅರಿವಿಲ್ಲ, ನಮ್ಮವರಿಗೆ ಅರಿವಿದ್ದವರೂ ಅಧಿಕಾರಕ್ಕೆ ಅಂಟಿ ಬಾಯಿ ಮುಚ್ಚಿ ಕುಳಿತಿದ್ದಾರೆ ಎಂದು ಟೀಕಿಸಿದರು.

1001179756

ಅಧಿಕಾರದ ಆಸೆಯ ನಮ್ಮವರ ಕುಮ್ಮಕ್ಕಿನಿಂದಲೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಲಿತ ವಿರೋಧಿ ಧೋರಣೆ ತಳೆದಿದೆ. ಇಲ್ಲವಾಗಿದ್ದಲ್ಲಿ ಒಳಮೀಸಲಾತಿ ಜಾರಿ  ಮಾಡುತ್ತಿದ್ದರು. ಹಳ್ಳಿಗಳಲ್ಲಿ ಮಾದಿಗ ಸಮುದಾಯದವರು ಯಾವ ಪರಿಸ್ಥಿಯಲ್ಲಿದ್ದಾರೆ ಎಂದು ಇವರಿಗೆ ತಿಳಿದಿದೆಯೇ ? ಮಾದಿಗರ ಕಷ್ಟ ಅವರಿಗೆ ಬೇಕಾಗಿಲ್ಲ, ಅಧಿಕಾರ, ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯ ಹೊರತು ದಲಿತರ ಹಿತ ಬೇಕಾಗಿಲ್ಲ ಎಂದರು.

ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ದಲಿತ ಮುಖಂಡರಾದ ಕೊಟ್ಟ ಶಂಕರ್, ಕೋಡಿಯಾಲ ಮಹದೇವ್, ಬಂಡೆ ಕುಮಾರ್, , ಪಿ.ಎನ್.ರಾಮಯ್ಯ, ಎನ್.ಆರ್.ಕಾಲೋನಿ ಕಿರಣ್, ಮರಳೂರು ಕೃಷ್ಣಮೂರ್ತಿ, ಮೋಹನ್‌ಕುಮಾರ್, ಮಲ್ಲಿಕ್, ಕ್ಯಾತ್ಸಂದ್ರ ನರಸಿಂಹಮೂರ್ತಿ, ಹನುಮೇಶ್ ಗುಡೂರು ಮೊದಲಾದ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...