ಒಳ ಮೀಸಲಾತಿ | ನಾಗಮೋಹನ್ ದಾಸ್ ಶಿಫಾರಸ್ಸುಗಳ ಯಥವಾತ್ತಾಗಿ ಜಾರಿಗೆ ಒತ್ತಾಯ

Date:

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ ಆರಂಭವಾಗುವ ಅಧಿವೇಶದಲ್ಲಿ ವರದಿಯನ್ನು ಮಂಡಿಸಿ,ಯಥವಾತ್ತಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ನಿರ್ಣಯ ಕೈಗೊಂಡಿದೆ.

- Advertisement -

ನಗರದ ಟೌನ್‌ಹಾಲ್ ಬಳಿ ಇರುವ ಮುರುಘಾ ರಾಜೇಂದ್ರ ಸಭಾಂಗಣದಲ್ಲಿ ನಡೆದ ಒಳಮೀಸಲಾತಿ ಹೋರಾಟ ಸಮಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಡೆದ ಒಳಮೀಸಲಾತಿ ಕುರಿತ ಸುಧೀರ್ಘ ಹೋರಾಟವನ್ನು ನೆನಪು ಮಾಡಿಕೊಳ್ಳುತ್ತಾ, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001848097

ಈ ವೇಳೆ ಮಾತನಾಡಿದ ಒಳಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ, ಮಾದಿಗ ಸಮುದಾಯದ ಮೂವತ್ತು ಹೋರಾಟಕ್ಕೆ ಕೊನೆಗೂ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ಮೂಡಿದೆ.ನ್ಯಾ ನಾಗಮೋಹನ್ ದಾಸ್ ಸಮಿತಿಯ ವರದಿಯ ಅಂಕಿ ಅಂಶಗಳ ಕುರಿತು ನಡೆಯುತ್ತಿರುವ ಚರ್ಚೆಯ ಪ್ರಕಾರವೇ ಮಾದಿಗ ಸಮುದಾಯಕ್ಕೆ ಶೇ7 ಮೀಸಲಾತಿ ಲಭಿಸಬೇಕಿತ್ತು.ಆದರೆ ಅಲೆಮಾರಿ ಸಮುದಾಯಗಳಿಗೆ, ಹಿಂದುಳಿದ ಸಮುದಾಯಗಳಿಗೆ ತಲಾ ಶೇ 1 ಮೀಸಲಾತಿ ನೀಡಿರುವುದು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿದಂತಾಗುತ್ತದೆ ಎಂಬ ಹಿನ್ನೆಲೆಯಲ್ಲಿ,ಈಗ ನೀಡಿರುವ ಮೀಸಲಾತಿ ಪ್ರಮಾಣವನ್ನು ಒಪ್ಪಿಕೊಂಡಿದ್ದು,ಇನ್ನೂ ಮೀನಾಮೇಷ ಎಣಿಸದೆ, ಆಗಸ್ಟ್ 11 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ, ಜಾರಿಗೆ ತರಬೇಕೆಂದು ಆಗ್ರಹಿಸುತ್ತೇವೆ. ಒಂದು ವೇಳೆ ಸರಕಾರ ಹಿಂದೇಟು ಹಾಕಿ ವಿಳಂಭ ಮಾಡಿದರೆ, ಆಗಸ್ಟ್ 16 ರಿಂದ ಉಗ್ರ ಹೋರಾಟಕ್ಕೆ ಅಣಿಯಾಗುವುದಾಗಿ ತಿಳಿಸಿದರು.

ಸಭೆಯಲ್ಲಿ ಹಿರಿಯ ಚಿಂತಕರಾದ ಕೆ.ದೊರೆರಾಜು,ಹಂಪಣ್ಣ ವಾಲಿಕಾರ್, ಬಸವರಾಜ ಕೌತಾರ್,ಎಂ.ಆರ್.ಹೆಚ್.ಎಸ್‌ನ ಕೇಶವಮೂರ್ತಿ, ಕುಂದೂರು ತಿಮ್ಮಯ್ಯ, ರಾಜಸಿಂಹ, ನರಸಿಂಹಮೂರ್ತಿ ಸೇರಿದಂತೆ ನೂರಕ್ಕೂ ಹೆಚ್ಚು ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...