ಬಿಜೆಪಿ ಅವಧಿಯಲ್ಲಿನ ಕಾಮಗಾರಿ ಬಗ್ಗೆ ತನಿಖೆ, ಗುಣಮಟ್ಟವಿದ್ದರೆ ಮಾತ್ರ ಹಣ ಬಿಡುಗಡೆ: ಸಿಎಂ

Date:

  • ‘ಯಾವುದೇ ಗುತ್ತಿಗೆದಾರರಿಗೆ ನಾವು ಹೊಸ ಕೆಲಸ ನೀಡಿಲ್ಲ’
  • ‘ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಿಲ್‌ ಬಾಕಿ ಇವೆʼ

ಗುತ್ತಿಗೆದಾರರ ಬಿಲ್‌ ಬಾಕಿ ಉಳಿದಿರುವುದು ಯಾರ ಅಧಿಕಾರಾವಧಿಯಲ್ಲಿ? ಈಗ ಬಂದು ಕೇಳಿದರೆ ಏಕಾಏಕಿ ಹಣ ಬಿಡುಗಡೆ ಮಾಡಲು ಆಗುತ್ತದಾ? ಕಾಮಗಾರಿಗಳ ಗುಣಮಟ್ಟ ನೋಡುವುದು ಬೇಡವೇ? ಹೀಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ಮೊದಲು ತನಿಖೆ ನಡೆಸಿ, ಗುಣಮಟ್ಟವಿದ್ದರೆ ಮಾತ್ರ ಹಣ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮ ಆಗುತ್ತದೆ. ಗುಣಮಟ್ಟದ ಕಾಮಗಾರಿ ಮಾಡಿದವರು ಭಯಪಡಬೇಕಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಅಧಿಕಾರಕ್ಕೆ ಬಂದು ನಾವು ಇನ್ನೂ ಮೂರು ತಿಂಗಳು ಕಳೆದಿಲ್ಲ. ಯಾವುದೇ ಗುತ್ತಿಗೆದಾರರಿಗೆ ಕೆಲಸ ನೀಡಿಲ್ಲ. ಬಿಜೆಪಿ ವಿರುದ್ಧ ಶೇ.40 ಕಮಿಷನ್ ದಂಧೆ ಬಗ್ಗೆ ನಾವೇ ಆರೋಪಿಸಿದ್ದೆವು. ಮೂರು ವರ್ಷ ಬಿಲ್ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಮತ್ತು ಬಿಜೆಪಿಯವರು ಈಗ ಹೋರಾಟ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಯಾವ ನೈತಿಕತೆ ಇದೆ” ಎಂದು ಪ್ರಶ್ನಿಸಿದರು.

”ಗುತ್ತಿಗೆದಾರರು ಕೈಗೊಂಡ ಕಾಮಗಾರಿಗಳ ಕುರಿತು ನಾಲ್ಕು ತಂಡಗಳಿಂದ ತನಿಖೆ ನಡೆಸುತ್ತಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಗುತ್ತಿಗೆದಾರರಿಗೆ ಬಿಲ್ ಪಾವತಿಸದ ವಿಚಾರವಾಗಿ ತನಿಖೆಗೆ ನಡೆಯುತ್ತಿದೆ. ಅವರು ನೀಡಿದ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪ್ರಾಮಾಣಿಕ ಗುತ್ತಿಗೆದಾರರು ಯಾರು ಆತಂಕಪಡುವ ಅಗತ್ಯವಿಲ್ಲ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ; ಮರುತನಿಖೆಗೆ ಒತ್ತಾಯ

“ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತು ಮರುತನಿಖೆ ನಡೆಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ” ಎಂದರು.

‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿನ್ ಲಾಡೆನ್ ಸರ್ಕಾರ’ ಎಂದು ಆರ್.ಅಶೋಕ್ ಆರೋಪಿಸಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ಈ ರೀತಿ ಮಾತನಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾವು 135 ಸ್ಥಾನ ಗೆದ್ದಿದ್ದಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಅವರು ಹತಾಶರಾಗಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...