ತನಿಖೆಯಿಂದ ಬಿಜೆಪಿಯವರ ಕಮಿಷನ್ ಕರ್ಮಕಾಂಡ‌ ಬಯಲಾಗಲಿದೆ: ದಿನೇಶ್‌ ಗುಂಡೂರಾವ್

Date:

  • ‘ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ’
  • ಬಿಜೆಪಿಯವರಿಗೆ ಗುತ್ತಿಗೆದಾರರ ಪರ ನಿಲ್ಲುವ ಯಾವ ನೈತಿಕತೆಯಿದೆ: ಪ್ರಶ್ನೆ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಯುತ್ತಿದೆ. ಇದರ ತನಿಖಾ ವರದಿ ಬಂದ ಬಳಿಕ ಬಿಲ್ ಪಾವತಿಸುತ್ತೇವೆ. ಆದರೆ, ಈ ತನಿಖೆಯಿಂದ ಬಿಜೆಪಿಯವರ ಕರ್ಮಕಾಂಡವೂ ಬಯಲಾಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನಾವು ಬಿಜೆಪಿಯವರಂತೆ ಗುತ್ತಿಗೆದಾರರ ಬಳಿ ಒಂದೇ ಒಂದು ಪರ್ಸೆಂಟ್ ಕಮಿಷನ್ ಕೇಳಿಲ್ಲ. ಕಾಂಟ್ರ್ಯಾಕ್ಟರ್ ಅಸೋಸಿಯೇಶನ್ ಕೂಡ ನಮ್ಮ ಮೇಲೆ ಕಮಿಷನ್ ಆರೋಪ ಹೊರಿಸಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಗುತ್ತಿಗೆ ಹಗರಣದ ತನಿಖೆಯಾಗಿ ಅದರ ವರದಿ ಬರುವವರೆಗೂ ಬಿಲ್ ಹಣ ತಡೆ ಹಿಡಿಯುವುದು ಅನಿವಾರ್ಯ. ನಿಯಮಾನುಸಾರ ಕಾಮಗಾರಿ ಮಾಡಿದ ಯಾವ ಗುತ್ತಿಗೆದಾರರು ಭಯ ಬೀಳುವ ಅವಶ್ಯಕತೆಯಿಲ್ಲ. ಅವರ ಹಣ ಬಿಡುಗಡೆಯಾಗಲಿದೆ. ಆದರೆ ಯಾರು ಅಕ್ರಮವೆಸಗಿದ್ದಾರೋ ಅಂತಹವರ ವಿರುದ್ಧವಷ್ಟೇ ನಮ್ಮ ಕ್ರಮ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

“ಹಿಂದಿನ ಬಿಜೆಪಿ ಸರ್ಕಾರ ಖಜಾನೆ ಲೂಟಿ ಮಾಡಿದ ಕಾರಣಕ್ಕಾಗಿಯೇ ಅಲ್ಲವೇ ಗುತ್ತಿಗೆದಾರರ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿದ್ದು? ಈಗ ಶುದ್ಧ ಸಚ್ಛಾರಿತ್ರ್ಯರಂತೆ ಪೋಸ್ ಕೊಡುವ ಬಿಜೆಪಿಯವರಿಗೆ ಗುತ್ತಿಗೆದಾರರ ಪರ ನಿಲ್ಲುವ ಯಾವ ನೈತಿಕತೆಯಿದೆ” ಎಂದು ಪ್ರಶ್ನಿಸಿದ್ದಾರೆ.

“ಗುತ್ತಿಗೆದಾರರ ಬಿಲ್ ಬಾಕಿ ಸಂಬಂಧ ಬಿಜೆಪಿಯವರು ಬೀದಿ ನಾಟಕ ಮಾಡುತ್ತಿದ್ದಾರೆ. ಆದರೆ ಬಿಜಿಪಿಯವರು ತಮ್ಮ ಅವಧಿಯಲ್ಲೇ ನಡೆದಿದ್ದ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿದ್ಯಾಕೆ ಎಂದು ಉತ್ತರಿಸುತ್ತಿಲ್ಲ. ಅಂದು 40% ಕಮಿಷನ್‌ಗಾಗಿ ಬಿಲ್ ತಡೆ ಹಿಡಿದಿದ್ದರೆ? ಹಿಂದಿನ ಬಿಜೆಪಿ ಸರ್ಕಾರ ಯಾವ ಕಾರಣಕ್ಕಾಗಿ ಗುತ್ತಿಗೆದಾರರ ಬಿಲ್ ತಡೆ ಹಿಡಿದಿತ್ತು?” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...