17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ ಕಥೆಗಾರ ಅಬ್ದುಲ್ ರಶೀದ್ ಅವರಿಗೆ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಗೌರವ ಸಲ್ಲಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಈ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಮ್ಮೇಳನದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಫ್. ಸಬಾಸ್ಟಿನ್, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರು ಹಾಗೂ ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಗುಡ್ಡೆಮನೆ ಉಪಸ್ಥಿತರಿದ್ದರು.
ಈ ವಿಶೇಷ ಸುದ್ದಿ ಓದಿದ್ದೀರಾ?ಅರಣ್ಯ ಇಲಾಖೆಯ ವಸಾಹತುಶಾಹಿ ವಿರುದ್ಧ ನಾಗರಹೊಳೆ ಆದಿವಾಸಿಗಳ ಹಕ್ಕು ಹೋರಾಟ
ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಆಹ್ವಾನದ ವೇಳೆ ಅಬ್ದುಲ್ ರಶೀದ್ ಅವರ ಪತ್ನಿ ಮೋಳಿ ವರ್ಗಿಸ್ ಕೂಡ ಇದ್ದರು.




