ಐಪಿಎಲ್ ಬೆಟ್ಟಿಂಗ್‌ | 1 ಕೋಟಿ ರೂ. ಕಳೆದುಕೊಂಡ ಪತಿ; ಪತ್ನಿ ಆತ್ಮಹತ್ಯೆ

Date:

ಐಪಿಎಲ್‌ ಕ್ರಿಕೆಟ್‌ ಟೂರ್ನಿ ಕಳೆದ ಕೆಲ ವರ್ಷಗಳಿಂದ ಕ್ರೀಡೆಯಾಗಿ ಮಾತ್ರವೇ ಉಳಿದಿಲ್ಲ. ಅದೊಂದು ಬೆಟ್ಟಿಂಗ್ ದಂಧೆಯ ಸರಕಾಗಿಯೂ ಮಾರ್ಪಟ್ಟಿದೆ. ಅಂತಹ ಬೆಟ್ಟಿಂಗ್ ಸರ್ಕಾರಿ ಉದ್ಯೋಗಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿದ್ದು, ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಬಸವ ಲೇಔಟ್‌ನಲ್ಲಿ ಮಾರ್ಚ್‌ 18ರಂದೇ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್‌ ದರ್ಶನ್‌ ಬಾಬು ಎಂಬಾತ ಬೇಗನೆ ಹಣ ಗಳಿಸಬೇಕೆಂದು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಪರಿಣಾಮ, ಕೋಟ್ಯಂತರ ರೂ. ಸಾಲ ಮಾಡಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆತ ಖಾಸಗಿ ಲೇವಾದೇವಿಗಾರರಿಂದ ಬರೋಬ್ಬರಿ ಸುಮಾರು 1 ಕೋಟಿ ರೂ. ಸಾಲ ಪಡೆದಿದ್ದರು. ತಾನು ಮಾಡಿರುವ ಸಾಲ ತೀರಿಸುವಂತೆ ಕುಟುಂಬಕ್ಕೂ ನಿತ್ಯ ಕಿರುಕುಳ ನೀಡುತ್ತಿದ್ದರು. ಲೇವಾದೇವಿಗಾರರ ಕಿರುಕುಳದಿಂದ ಬೇಸತ್ತ ಆತನ ಪತ್ನಿ ರಂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದರ್ಶನ್ ಮತ್ತು ರಂಜಿತಾ 2020ರಲ್ಲಿ ವಿವಾಹವಾಗಿದ್ದರು. ಅವರು ವಿವಾಹವಾಗಿ ಒಂದು ವರ್ಷದ ಬಳಿಕ, 2021ರಲ್ಲಿ ದರ್ಶನ್‌ಗೆ ಬೆಟ್ಟಿಂಗ್ ಚಟ ಇರುವುದಾಗಿ ರಂಜಿತಾಗೆ ಗೊತ್ತಾಗಿತ್ತು ಎಂದು ಪೋಲೀಸರು ತಿಳಿಸಿದ್ದಾರೆ.

ಗಮನಿಸಿ: ಬೇಗನೆ ಹಣ ಗಳಿಸಬೇಕೆಂದು ಲಾಟರಿ, ಬೆಟ್ಟಿಂಗ್‌, ಜೂಜಿನಂತಹ ಕೃತ್ಯಗಳಲ್ಲಿ ಭಾಗಿಯಾಗುವುದು ಕಾನೂನು ಬಾಹಿರ ಅಪರಾಧ. ಇವುಗಳಲ್ಲಿ ಭಾಗಿಯಾದರೆ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಿಗಿಲಾಗಿ, ಹಣ ಗಳಿಕೆಯ ಈ ಅಕ್ರಮ ಮಾರ್ಗಗಳು ನಮ್ಮ ಜೀವನನ್ನೇ ನಾಶ ಮಾಡುತ್ತದೆ. ಹಲವಾರು ಯುವಜನರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿ, ತಮ್ಮ ಬದುಕನ್ನೇ ಕಳೆದುಕೊಂಡಿದ್ದಾರೆ. ಲಾಟರಿ, ಬೆಟ್ಟಿಂಗ್, ಜೂಜಿನಿಂದ ದೂರವಿರಿ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...