ಪಿಎಸ್‌ಐ ನೇಮಕಾತಿ ಹಗರಣ | ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಅಮೃತ್‌ ಪೌಲ್‌

Date:

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರ ನೇತೃತ್ವದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿದೆ.

ಅಮೃತ್‌ ಪೌಲ್‌ ಪರ ವಕೀಲ ಎಂ ಎಸ್‌ ಶ್ಯಾಮ್‌ಸುಂದರ್‌ ಅವರು “ಪೌಲ್‌ ಅವರ ಬಂಧನ ಕಾನೂನುಬಾಹಿರವಾಗಿದೆ. ಬಂಧನವಾಗಿ ಒಂದು ವರ್ಷ ಸಮೀಪಿಸುತ್ತಿದ್ದು, ಸಂಜ್ಞೇಯ ಪರಿಗಣಿಸದೇ ಬಂಧಿಸಿ, ರಿಮ್ಯಾಂಡ್‌ನಲ್ಲಿ ಇಟ್ಟಿರುವುದು ಕಾನೂನುಬಾಹಿರ” ಎಂದು ವಾದಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಂತುಗಳ ರೂಪದಲ್ಲಿ ಆರೋಪ ಪಟ್ಟಿ ಸಲ್ಲಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗೆ ಮಾಡುವುದು ಆರೋಪಿಯ ಹಕ್ಕಿಗೆ ವಿರುದ್ಧವಾಗಿದ್ದು, ಅದನ್ನು ಬದಿಗೆ ಸರಿಸಬೇಕು. ಈ ನಡೆಯನ್ನು ಪ್ರಕರಣವೊಂದರಲ್ಲಿ ದೆಹಲಿ ಹೈಕೋರ್ಟ್‌ ಖಂಡಿಸಿದೆ. ತನಿಖೆ ಪೂರ್ಣಗೊಂಡಿದ್ದರೂ ಬಾಕಿ ಎಂದು ಹೇಳಲಾಗುತ್ತಿದೆ” ಎಂದು ಪೌಲ್‌ ಪರ ವಕೀಲ ಆಕ್ಷೇಪಿಸಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜೂನ್‌ 8ಕ್ಕೆ ಮುಂದೂಡಿದೆ. ಈ ಹಿಂದೆ ಸತ್ರ ನ್ಯಾಯಾಲಯವು ಹಲವು ಬಾರಿ ಪೌಲ್‌ ಅವರ ಜಾಮೀನು ಅರ್ಜಿ ವಜಾ ಮಾಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಪೆ ಶಿಕ್ಷಣದಿಂದ ಸಂವಿಧಾನ ಬುಡಮೇಲು: ಶಿಕ್ಷಣ ತಜ್ಞ ನಿರಂಜನಾರಾಧ್ಯ

"ರಾಜ್ಯದಲ್ಲಿ 2009ರ ಶಿಕ್ಷಣ ಹಕ್ಕು ಕಾಯ್ದೆಯು ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ. ಅದರ...

ದರ್ಶನ್ ಪ್ರಕರಣ | ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 15 ಆರೋಪಿಗಳನ್ನು...

ಭಾಷಾ ಅಲ್ಫಸಂಖ್ಯಾತ ಶಿಕ್ಷಣ ಸಂಸ್ಥೆಗಳ ಷರತ್ತು ಸಡಿಲಿಸಲು ಸಚಿವ ಜಮೀರ್‌ಗೆ ಪುಟ್ಟಣ್ಣ ನಿಯೋಗ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ...