ಬೆಂಗಳೂರು ವಿವಿ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಹೈಕೋರ್ಟ್‌ನಿಂದ ವಿವಿಗೆ ನೋಟಿಸ್ ಜಾರಿ

Date:

Advertisements

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿವಿಗೆ ನೋಟಿಸ್‌ ಜಾರಿ ಮಾಡಿದೆ.

ಅಧಿಸೂಚಿಸಲಾದ ಕಾಲೇಜುಗಳಲ್ಲಿ ಜೂನ್‌ 16, 2023ರಂದು ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ ಅಥವಾ ಪ್ರವೇಶ ಪತ್ರವನ್ನು ಪರಿಶೀಲಿಸದೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಕೆಲವು ವಿದ್ಯಾರ್ಥಿಗಳು ಮೊಬೈಲ್ ಗಳನ್ನು ತೆಗೆದುಕೊಂಡು ಹೋಗಿದ್ದು, ಮೊಬೈಲ್ ಮೂಲಕ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿಕೊಂಡು ಬರೆದಿದ್ದರು. ಹಾಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿಗಳು, ಪಿಹೆಚ್‌ಡಿ ಪಡೆದಿರುವ ವಿದ್ಯಾರ್ಥಿಗಳು ಹಾಗೂ ಕೆಲವು ಸ್ವಯಂ ಘೋಷಿತ ನಾಯಕರು ಪ್ರವೇಶ ಪರೀಕ್ಷೆಯ ಕೇಂದ್ರಗಳಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪರೀಕ್ಷಾ ಅಕ್ರಮ ನಡೆಯಲು ಸಹಾಯ ಮಾಡಿದ್ದರು ಎಂದು ಅರ್ಜಿದಾರರಾದ ಎಸ್‌ ಆದಿ ಮಂಜುನಾಥ್‌ ಅವರು ಪ್ರಕರಣ ದಾಖಲಿಸಿದ್ದಾರೆ.

bangalore university

ಅಕ್ರಮ ಪರೀಕ್ಷೆಗೆ ಸಂಬಂಧಿಸಿದಂತೆ ವಿವಿ ಕುಲಪತಿ, ಮೌಲ್ಯಮಾಪನ ಕುಲಸಚಿವರು, ಪಿಹೆಚ್‌ಡಿ ಪರೀಕ್ಷೆಯ ವಿಶೇಷ ಅಧಿಕಾರಿಗಳಿಗೆ ಪರೀಕ್ಷೆ ರದ್ದುಗೊಳಿಸುವಂತೆ ಅರ್ಜಿದಾರರ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು. ಆದರೆ ವಿವಿಯು ದೂರಿನ ಯಾವುದೇ ಮನವಿ ಪರಿಗಣಿಸದೆ ತರಾತುರಿಯಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು. ತಾತ್ಕಾಲಿಕ ಕೀ ಉತ್ತರಗಳಲ್ಲಿ ಹಲವು ಲೋಪದೋಷಗಳಿರುವ ಕಾರಣ ಪ್ರಕಟಿಸಿದ ಕೀ ಉತ್ತರಗಳನ್ನು ಸರಿಪಡಿಸುವ ನೆಪದಲ್ಲಿ ಮತ್ತೊಂದು ಬಾರಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆಗಳಿಗೆ ಕೇವಲ ಒಂದೇ ದಿನ ಅವಕಾಶವನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಮತ್ತು ಮರು ಪರೀಕ್ಷೆ ನಡೆಸುವಂತೆ ಅರ್ಜಿದಾರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Advertisements

ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿನಗಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಮೌಲ್ಯಮಾಪನ ಕುಲಸಚಿವರು, ವಿಶೇಷ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿ ಒಂದು ವಾರದೊಳಗೆ ಉತ್ತರವನ್ನು ನೀಡಬೇಕೆಂದು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X