ಇಸಿ ಪಡೆಯಲು ನೀರಾವರಿ ಇಲಾಖೆ ವಿಫಲ; 50 ಕೋಟಿ ರೂ. ದಂಡ ವಿಧಿಸಿದ ಎನ್‌ಜಿಟಿ

Date:

  • ನಿರ್ವಹಣೆ ಮತ್ತು ವಿಪತ್ತು ನಿರ್ವಹಣೆಯ ಉದ್ದೇಶಕ್ಕೆ ಹೂಳೆತ್ತಲು ವಿನಾಯಿತಿ
  • ಇಸಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ಪ್ರಸ್ತುತ ಆದೇಶಗಳು ಸಂಪೂರ್ಣ ಉಲ್ಲಂಘನೆ

ಜಲಮೂಲಗಳಿಂದ ಹೂಳು ಮತ್ತು ಮರಳು ತೆಗೆಯುವ ಮೊದಲು ಪರಿಸರ ಅನುಮತಿ (ಇಸಿ) ಪಡೆಯಲು ವಿಫಲವಾದ ನೀರಾವರಿ ಇಲಾಖೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 50 ಕೋಟಿ ರೂ. ದಂಡ ವಿಧಿಸಿದೆ.

- Advertisement -

ಹೂಳೆತ್ತಿದ ಮರಳನ್ನು ಸಾರ್ವಜನಿಕ ಅಥವಾ ಸರ್ಕಾರಿ ಯೋಜನೆಗಳಿಗೆ ಮಾರಾಟ ಮಾಡುವಾಗ ಇದನ್ನು ವಿಶೇಷವಾಗಿ ಅನುಸರಿಸಬೇಕು ಎಂದು ನ್ಯಾಯಮಂಡಳಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಂಗಳೂರಿನ ಫಲ್ಗುಣಿ ನದಿಯ ಅಧ್ಯಪಾಡಿ ಅಣೆಕಟ್ಟು ಮತ್ತು ಬಂಟ್ವಾಳದ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಶಂಭೂರು ಅಣೆಕಟ್ಟಿನ ಹಿನ್ನೀರಿನಿಂದ 14,51,680 ಮೆಟ್ರಿಕ್ ಟನ್ ಮರಳನ್ನು ಹೊರತೆಗೆಯಲು ನೀರಾವರಿ ಇಲಾಖೆ ಮುಂದಾಗಿತ್ತು. ಅದಕ್ಕಾಗಿ ‘ಇಸಿ’ ಪಡೆಯುವಲ್ಲಿ ಇಲಾಖೆ ವಿಫಲವಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಎನ್‌ಜಿಟಿ ನಡೆಸುತ್ತಿದೆ.

ವಿಚಾರಣೆ ವೇಳೆ ಎಸ್ಇಐಎಎಯನ್ನು ತರಾಟೆಗೆ ತೆಗೆದುಕೊಂಡ ಎನ್‌ಜಿಟಿ, “ಚುನಾವಣಾ ಆಯೋಗವನ್ನು ವಿಚಾರಿಸದಿದ್ದಾಗ ಅವರು ಮೂಕ ಪ್ರೇಕ್ಷಕರಾಗಿದ್ದರು. ಹೂಳು ತೆಗೆಯುವ ವಸ್ತುಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುವಾಗ ಇಸಿ ಪಡೆದುಕೊಳ್ಳುವುದು ಅಗತ್ಯವೆಂದು ಪದೇ ಪದೆ ಹೇಳುತ್ತಿದೆ. ಆದರೂ, ಇಸಿ ಪಡೆದುಕೊಳ್ಳದೆ ಕಾಮಗಾರಿಗೆ ಜಿಲ್ಲಾಧಿಕಾರಿ ಆದೇಶಿಸಿರುವುದು, ನಿಮಯಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆದೇಶದಲ್ಲಿ ತಿಳಿಸಿದೆ.

“2006ರ ಇಐಎ ಅಧಿಸೂಚನೆಯು ನಿರ್ವಹಣೆ ಮತ್ತು ವಿಪತ್ತು ನಿರ್ವಹಣೆಯ ಉದ್ದೇಶಕ್ಕಾಗಿ ಮಾತ್ರ ಅಣೆಕಟ್ಟುಗಳ ಹೂಳೆತ್ತುವಿಕೆಗೆ ವಿನಾಯಿತಿ ಇದೆ. ಆದರೆ, ವಾಣಿಜ್ಯ ಮರಳು ಗಣಿಗಾರಿಕೆ ನಡೆಸಬಾರದು. ವಾಣಿಜ್ಯ ಉದ್ದೇಶಕ್ಕೆ ಮರಳು ಗಣಿಗಾರಿಕೆ ನಡೆಸಿದ ಸಂದರ್ಭದಲ್ಲಿ ಪರಿಸರ ಅನುಮತಿ ಪಡೆಯಬೇಕು” ಎಂದು ಎನ್‌ಜಿಟಿ ತಿಳಿಸಿದೆ.

“ರಾಜ್ಯ ಸರ್ಕಾರವು 2020ರ ಮೇ 5ರಂದು ಅಧಿಸೂಚನೆ ಹೊರಡಿಸಿದ ಮರಳು ನೀತಿಯನ್ನು ನ್ಯಾಯಮಂಡಳಿ ಗಮನಿಸಿದೆ. ಪರಿಸರ ಸಚಿವಾಲಯದ ಸುಸ್ಥಿರ ಮರಳು ಗಣಿಗಾರಿಕೆ ಮಾರ್ಗಸೂಚಿ 2016, ಗಣಿಗಾರಿಕೆ ಕಾರ್ಯಾಚರಣೆಯ ಮೂಲಕ ಹೂಳೆತ್ತುವುದನ್ನು ವಿವರಿಸುತ್ತದೆ” ಎಂದು ಸ್ಪಷ್ಟಪಡಿಸಿದೆ.

ಗಣಿಗಾರಿಕೆಗೆ ಗುತ್ತಿಗೆ ನೀಡುವ ಮೊದಲು ಇಸಿ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಎನ್‌ಜಿಟಿ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...