ಹಾಸನ | ಜೆಡಿಎಸ್‌ ಹಿಡಿತವಿರುವ ಎಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

Date:

  • ಎಚ್ ಡಿ ರೇವಣ್ಣ ಆಪ್ತ ಸೋಮನಹಳ್ಳಿ ನಾಗರಾಜ್ ಬ್ಯಾಂಕ್ ಅಧ್ಯಕ್ಷ
  • ಕುತೂಹಲ ಮೂಡಿಸಿದ ಚುನಾವಣೆಯ ಸಂದರ್ಭದಲ್ಲಿನ ಐಟಿ ದಾಳಿ

ಜೆಡಿಎಸ್ ಹಿಡಿತವಿರುವ ಹಾಗೂ ಎಚ್ ಡಿ ರೇವಣ್ಣ ಅವರ ಆಪ್ತ ಸೋಮನಹಳ್ಳಿ ನಾಗರಾಜ್ ಅಧ್ಯಕ್ಷರಾಗಿರುವ ಹಾಸನದ ಎಚ್‌ಡಿಸಿಸಿ ಬ್ಯಾಂಕ್ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಐಟಿ ಇಲಾಖೆಯ ಸುಮಾರು ಎಂಟು ಸದಸ್ಯರ ತಂಡ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಚ್‌ಡಿಸಿಸಿ) ಮೇಲೆ ದಾಳಿ ನಡೆಸಿದ್ದಾರೆ. ತಮಿಳುನಾಡು ಮತ್ತು ಗೋವಾದ ಐಟಿ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಐಟಿ ದಾಳಿ ಹಿನ್ನೆಲೆ ಎರಡು ದಿನಗಳ ಕಾಲ ಬ್ಯಾಂಕ್ ಮುಚ್ಚಲಾಗಿತ್ತು.

ಬ್ಯಾಂಕ್ ಕಾರ್ಯನಿರ್ವಹಣೆ ಬಗ್ಗೆ ಸಾಕಷ್ಟು ದೂರುಗಳ ಹಿನ್ನೆಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಶುಕ್ರವಾರ ರಾತ್ರಿಯೇ ಬ್ಯಾಂಕ್ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಶನಿವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದರು.

ಡಿಸಿಸಿ ಬ್ಯಾಂಕ್ ಹಾಸನ ಜಿಲ್ಲೆಯಲ್ಲಿ 34 ಶಾಖೆಗಳನ್ನು ಹೊಂದಿದ್ದು, ವಾರ್ಷಿಕ ಅಂದಾಜು ₹1,700 ಕೋಟಿ ವಹಿವಾಟು ನಡೆಸುತ್ತಿದೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಐಟಿ ಅಧಿಕಾರಿಗಳು ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮೂಲಸೌಕರ್ಯ ಕೊರತೆ; ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ಗ್ರಾಮಸ್ಥರ ಎಚ್ಚರಿಕೆ

ಎಚ್‌ಡಿಸಿಸಿ ಬ್ಯಾಂಕ್ ಮೂರು ಲಕ್ಷಕ್ಕೂ ಅಧಿಕ ಖಾತೆದಾರರನ್ನು ಹೊಂದಿದೆ. ಒಟ್ಟು 13 ನಿರ್ದೇಶಕರನ್ನು ಹೊಂದಿರುವ ಬ್ಯಾಂಕ್ ಮೇಲೆ ಜೆಡಿಎಸ್ ಹಿಡಿತವಿದೆ. ಕಳೆದ ಸಾಲಿನಲ್ಲಿ ಬ್ಯಾಂಕ್ ಅಂದಾಜು ₹565 ಕೋಟಿ ಕೃಷಿಯೇತರ, ₹1,000 ಕೋಟಿಗೂ ಅಧಿಕ ಕೃಷಿ ಸಾಲ ವಿತರಣೆ ಮಾಡಿದೆ. ಅಂದಾಜು 1.70 ಲಕ್ಷ ರೈತರಿಗೆ ಕೃಷಿ ಕೃಷಿಯೇತರ ಸಾಲ ಮಂಜೂರು ಮಾಡಿದೆ.

“ಐಟಿ ಅಧಿಕಾರಿಗಳು ಖಾತೆಗಳು ಮತ್ತು ಅಂಕಿಅಂಶಗಳ ಪುಸ್ತಕಗಳನ್ನು ಪರಿಶೀಲಿಸಲು ಬ್ಯಾಂಕಿಗೆ ಭೇಟಿ ನೀಡಿದ್ದಾರೆ. ಇದು ಸಾಮಾನ್ಯ ಪ್ರಕ್ರಿಯೆಯಾಗಿದೆ” ಎಂದು ಎಚ್‌ಡಿಸಿಸಿ ಬ್ಯಾಂಕ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕ ಕಡಿತ

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ...

ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

ರಾಯಚೂರು ನಗರದ ಕಾಟೆದರವಾಜ್‌ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ...

ಧಾರವಾಡ | ಅತ್ಯಲ್ಪ ಪರಿಹಾರದಿಂದ ಅಸಮಾಧಾನ; ರಸ್ತೆಗೆ ಬೃಹತ್ ‘ಹಂಪ್‌’ ಹಾಕಿದ ಮಾಲೀಕ

ರಸ್ತೆ ನಿರ್ಮಾಣಕ್ಕೆ ಜಮೀನು ಸ್ವಾಧೀನಕ್ಕಾಗಿ ಅತ್ಯಲ್ಪ ಪರಿಹಾರ ನೀಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದ ನಿವೃತ್ತ...

ಕಲಬುರಗಿ | ಕನಕ ಜಯಂತಿ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ

ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ....