ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

Date:

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್‌ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಇದರಿಂದ ಬೇಸರಗೊಂಡಿರುವ ಅವರು ಶನಿವಾರ ಸಂಪುಟ ವಿಸ್ತರಣೆಯಾದ ಕೂಡಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಹೈಕಮಾಂಡ್‌ ಜೊತೆ ನೇರ ಸಂಪರ್ಕದಲ್ಲಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಪಕ್ಷ ನಿಷ್ಠೆ, ಹಿರಿತನ ಹಾಗೂ ಈಡಿಗ ಸಮುದಾಯದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕಾಂಗ್ರೆಸ್‌ ಪಡಸಾಲೆಯಲ್ಲಿ ಹೆಚ್ಚು ಕೇಳಿಬಂದಿದ್ದವು. ಆದರೆ, ಹರಿಪ್ರಸಾದ್‌ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿ, ಮಾಜಿ ಸಿಎಂ ಎಸ್‌ ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಅವರಿಗೆ ಹಠ ಹಿಡಿದು ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ವಿಚಾರವಾಗಿ ಬಿ ಕೆ ಹರಿಪ್ರಸಾದ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ “ಈ ಬಗ್ಗೆ ಆ ಮೇಲೆ ಮಾತನಾಡುವೆ” ಎಂದಷ್ಟೇ ಹೇಳಿದರು.

ಬಿ ಕೆ ಹರಿಪ್ರಸಾದ್‌ ಅವರ ರಾಜೀನಾಮೆ ನೀಡಲಿದ್ದಾರೆ ಎಂಬ ವಿಷಯ ಹೈಕಮಾಂಡ್‌ ತಲುಪಿದ್ದು, ಅವರನ್ನು ಮನವೊಲಿಸುವ ಸಾಧ್ಯತೆ ಹೆಚ್ಚಿದೆ. ಹೈಕಮಾಂಡ್‌ ಮಾತಿಗೆ ಕಟ್ಟುಬಿದ್ದು, ಹರಿಪ್ರಸಾದ್‌ ಅವರು ಪಕ್ಷದಲ್ಲೇ ಉಳಿಯುತ್ತಾರಾ ಎಂಬುದು ಕಾದುನೋಡಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸರ್ಕಾರದ ವಿರುದ್ಧ ಜೂನ್ 7, 8ರಂದು ಪ್ರತಿಭಟನೆ: ಬಿಜೆಪಿ

ನೂತನ ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿದ್ದವಾದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಗೊಂದಲದ ನೀತಿಗಳ...

ಕೋಲಾರ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು

ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ...

ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟು ಗೋ ಹತ್ಯೆ...

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...