ಬೀದರ್‌ |ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕ ಸತ್ಯ: ಡಾ.ಬಸವಲಿಂಗ ಪಟ್ಟದ್ದೇವರು

Date:

Advertisements
  • ಹಬ್ಬಗಳನ್ನು ವೈಜ್ಞಾನಿಕವಾಗಿ ಆಚರಿಸುವಂತೆ ಸಲಹೆ
  • ಭಾಲ್ಕಿಯ ಹಿರೇಮಠದಲ್ಲಿ ಬಸವ ಪಂಚಮಿ ಆಚರಣೆ

ಹಬ್ಬಗಳ ಹೆಸರಿನಲ್ಲಿ ಕಲ್ಲನಾಗರ, ಹುತ್ತಕ್ಕೆ ಹಾಲನ್ನು ಹಾಕದೇ ಬಡ ಮಕ್ಕಳು, ನಿರ್ಗತಿಕರಿಗೆ, ಹಿರಿಯರು, ರೋಗಿಗಳಿಗೆ ನೀಡಿದರೆ ಸಾರ್ಥಕವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕವಾಗಿ ಸತ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಅಭಿಪ್ರಾಯಪಟ್ಟರು.

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಕಾರ್ಯಕ್ರಮದಲ್ಲಿ ಹಾನಗಲ್ ಕುಮಾರೇಶ್ವರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ” ಸಮಾಜದಲ್ಲಿ ಬಹಳಷ್ಟು ಬಡ ಜನರಿಗೆ ಕುಡಿಯಲು ಹಾಲು ಸಿಗುತ್ತಿಲ್ಲ. ಅನೇಕ ಮಕ್ಕಳು ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳು, ವಯೋವೃದ್ಧರು, ರೋಗಿಗಳು, ಬಡವರು, ನಿರ್ಗತಿಕರಿಗೆ ಹಾಲನ್ನು ನೀಡಿ ಮಾನವರಲ್ಲಿ ನಿಜವಾದ ದೇವರು ಕಾಣಬೇಕು. ನಮ್ಮಲ್ಲಿನ ಮೂಢನಂಬಿಕೆಗಳನ್ನು ತೊಡೆದು ಹಾಕುವ ಮೂಲಕ ವೈಜ್ಞಾನಿಕ ಮತ್ತು ವೈಚಾರಿಕವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ‘ಕೆಕೆಆರ್‌ಡಿಬಿ’ಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

Advertisements

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಪ್ರಮುಖರಾದ ಸಂಗಮೇಶ ವಾಲೆ, ಸುನಿಲ ಹೊನ್ನಾಳೆ, ಬಾಬುರಾವ ಹುಣಜೆ, ಬಾಬು ಬೆಲ್ದಾಳ, ಮಲ್ಲಮ್ಮ ನಾಗನಕೇರೆ, ಕೀರ್ತಿ ಶಶಿಧರ ಸೇರಿದಂತೆ ಹಲವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X