ರಾಯಚೂರು | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಗಟ್ಟಲು ಮುಂದಾಗಿ: ಆರ್.ಇಂದಿರಾ

Date:

  • ಶೃತಿ ಸಂಸ್ಕೃತಿ ಸಂಸ್ಥೆಯಿಂದ ಹೆಣ್ಣು ಮಕ್ಕಳ ಶಿಕ್ಷಣ ಸವಾಲು ಸಮಾಲೋಚನಾ ಕಾರ್ಯಾಗಾರ
  • ಮಕ್ಕಳು ಮತ್ತು ಮಹಿಳೆಯರ ಬಲವರ್ಧನೆಗೆ ಕಾರ್ಯಾಗಾರ ಅನುಕೂಲಕರ

ಮಕ್ಕಳು ಮತ್ತು ಮಹಿಳೆಯರ ಬಲವರ್ಧನೆಗೆ ಕಾರ್ಯಾಗಾರಗಳು ಅನುಕೂಲವಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚುತ್ತಿರುವುದು ಆತಂಕವನ್ನುಂಟು ಮಾಡಿದೆ ಎಂದು ಸಮಗ್ರ ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಆರ್.ಇಂದಿರಾ ಕಳವಳ ವ್ಯಕ್ತಪಡಿಸಿದರು.

ನಗರದ ಕ್ರೈಸ್ತ ಸಂಸ್ಥೆ ಹಾಗೂ ಶೃತಿ ಸಂಸ್ಕೃತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ʼಹದಿಹರಿಯದ ಹೆಣ್ಣು ಮಕ್ಕಳ ಶಿಕ್ಷಣ ಸವಾಲುಗಳುʼ ಕುರಿತು ಒಂದು ದಿನದ ಸಮಾಲೋಚನೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, “ಬಾಲ್ಯ ವಿವಾಹಗಳನ್ನು ಸಂಪೂರ್ಣವಾಗಿ ತಡೆಗಟ್ಟಬೇಕು, ಹೆಣ್ಣು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಮೂಲಕ ಅವರ ಜೀವನಕ್ಕೆ ಉತ್ತಮ ಅಡಿಪಾಯ ಹಾಕಬೇಕು. ಪೋಷಕರು ತಮ್ಮ ಮಕ್ಕಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕಳಿಸಿದರಷ್ಟೇ ಸಾಲದು. ಅವರ ಮುಂದಿನ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಿಸುವಂತಹ ಕಾರ್ಯ ಮಾಡಬೇಕೆಂದು” ತಿಳಿಸಿದರು.

“ಕೇವಲ ಹೆಣ್ಣು ಮಕ್ಕಳ ಶಿಕ್ಷಣ ಅಂದರೆ ಶಿಕ್ಷಣ ಇಲಾಖೆಗೆ ಮಾತ್ರ ಆ ಜವಾಬ್ದಾರಿ ಸೀಮಿತವಲ್ಲ. ಉಳಿದ 56 ಇಲಾಖೆಗಳು ಸಹ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುಂದಾಗಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚ್ಛೇದನ ಪ್ರಕರಣ; ರಾಜಿ ಸಂಧಾನದಿಂದ ಎಂಟು ಜೋಡಿಗಳ ಮರುಮದುವೆ

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರಬಾಬು ಮಾತನಾಡಿದರು.

ಅಂಬಣ್ಣ ಆರೋಲಿಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ತಜ್ಞ ಡಾ. ವಿ.ಪಿ.ನಿರಂಜನ್ ಆರಾಧ್ಯ, ಪ್ರೌಢಶಾಲಾ ತಾಲೂಕು ಅಧ್ಯಕ್ಷ ಚಂದ್ರಶೇಖರ್ ರೆಡ್ಡಿ, ಮೈನುಲ್ ಹಕ್. ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಮಹೆಶ್ ನಾಯಕ್, ಬಾಲ ಕಾರ್ಮಿಕ ಯೋಜನೆ ಜಿಲ್ಲಾ ಯೋಜನಾಧಿಕಾರಿ ಮಂಜುನಾಥ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...