ಸಂಸತ್‌ ಭವನ ಉದ್ಘಾಟನೆ | ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿದ್ದು ನನ್ನ ಸೌಭಾಗ್ಯ: ಎಚ್‌ ಡಿ ದೇವೇಗೌಡ

Date:

ನನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ. ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ 91 ವರ್ಷ ವಯಸ್ಸಿನ ದೇವೇಗೌಡರು ಭಾಗಿಯಾಗಿ ಮಾಧ್ಯಮಗಳ ಮುಂದೆ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ.

“ಭಾರತೀಯ ಸಂಪ್ರದಾಯದಲ್ಲಿ ಮತ್ತು ಸಾಮಾನ್ಯ ಭಾರತೀಯನ ಜೀವಿತಾವಧಿಯಲ್ಲಿ ಹೊಸ ಮನೆ ನಿರ್ಮಾಣ ಮತ್ತು ಹೊಸ ಮನೆಗೆ ಪ್ರವೇಶಿಸುವುದು ಅತ್ಯಂತ ಮಂಗಳಕರ ಹಾಗೂ ಅಪರೂಪದ ಕ್ಷಣವಾಗಿದೆ” ಎಂದು ಬಣ್ಣಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“1962ರಲ್ಲಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿದ್ದೆ. 1991ರಿಂದ ಸಂಸತ್ ಸದಸ್ಯನಾಗಿದ್ದೇನೆ. 32 ವರ್ಷಗಳ ಹಿಂದೆ ಈ ಮಹಾಮನೆಯನ್ನು ಪ್ರವೇಶಿಸಿದಾಗ ನಾನು ಪ್ರಧಾನಿಯಾಗುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ ಹಾಗೂ ಸಾರ್ವಜನಿಕ ಜೀವನದಲ್ಲಿ ಇಷ್ಟು ದಿನ ಇರುತ್ತೇನೆ ಎಂದು ನಾನು ನಿರೀಕ್ಷಿಸಿರಲಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...