ಉಡುಪಿ | ಅಶಕ್ತರಿಗೆ ನೆರವು ನೀಡುವುದೇ ಕಾಂಗ್ರೆಸ್ ಪಕ್ಷದ ಮೂಲ ಧ್ಯೇಯ : ಐವನ್ ಡಿಸೋಜ

Date:

ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಉಡುಪಿ ಪುರಭವನದಲ್ಲಿ ಭಾನುವಾರ ರಕ್ತದಾನ ಶಿಬಿರ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅಶಕ್ತರಿಗೆ ನೆರವು ನೀಡುವುದೇ ಕಾಂಗ್ರೆಸ್ ಪಕ್ಷದ ಮೂಲ ಧ್ಯೇಯವಾಗಿದೆ ಎಂದು ಹೇಳಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

WhatsApp Image 2025 10 27 at 12.32.58 AM 1

ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ 238 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಿದ್ದರು.

ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ರಮೇಶ್ ಕಾಂಚನ್, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಪಿ. ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...