ಬೀದರ್ | ಜಗನ್ನಾಥ ಹೆಬ್ಬಾಳೆ ಸಾಂಸ್ಕೃತಿಕ ಶಕ್ತಿ : ಪರಮೇಶ್ವರ ನಾಯ್ಕ್

Date:

Advertisements

ಬೀದರ ವಿಶ್ವವಿದ್ಯಾಲಯದ ಡೀನರಾಗಿ ಮಾಡಿದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಪ್ರೊ.ಜಗನ್ನಾಥ ಹೆಬ್ಬಾಳೆ ಅವರು ಈ ನೆಲದಲ್ಲಿ ಒಂದು ಸಾಂಸ್ಕೃತಿಕ ಶಕ್ತಿಯಾಗಿ ಸದಾ ಕ್ರಿಯಾಶೀಲರಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯ್ಕ್ ಹೇಳಿದರು.

ಬೀದರ ವಿಶ್ವವಿದ್ಯಾಲಯದ ಕನ್ನಡ ವಿಭಾಗ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಕರ್ನಾಟಕ ಕಾಲೇಜು ಕನ್ನಡ ವಿಭಾಗದ ಸಹಯೋಗದಲ್ಲಿ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರೊ ಜಗನ್ನಾಥ ಹೆಬ್ಬಾಳೆ ಅವರ ಬದುಕು ಬರಹ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಶೈಕ್ಷಣಿಕ, ಸಾಹಿತ್ಯಕ, ಸಾಮಾಜಿಕ ತುಡಿತವಿರುವ ವ್ಯಕ್ತಿತ್ವ ಹೆಬ್ಬಾಳೆ ಅವರದು’ ಎಂದರು.

ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ. ದೇವಿದಾಸ ತುಮಕುಂಟೆ ಮಾತನಾಡಿ, ‘ಹೆಬ್ಬಾಳೆ ಅವರ ಸಮಾಜ ಪರವಾದ ಕಾಳಜಿ ಶ್ಲಾಘನೀಯ. ಅವರು ಕರ್ನಾಟಕ ಕಾಲೇಜಿನ ಕನ್ನಡ ವಿಭಾಗದ ಜೊತೆಗೆ ಹಲವು ವಿಭಾಗಗಳು ಕಟ್ಟಲು ಶ್ರಮಿಸಿದರು. ಅವರ ಸ್ನೇಹದ ವ್ಯಕ್ತಿತ್ವಕ್ಕೆ ಹಲವರು ಸೋತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಸಾಹಿತ್ಯ ಸಮ್ಮೇಳನ, ಜಾನಪದ ಸಮ್ಮೇಳನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ’ ಎಂದರು.

Advertisements

ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕಿ ಡಾ.ಮಹಾದೇವಿ ಹೆಬ್ಬಾಳೆ ಮಾತನಾಡಿ, ‘ಜಗನ್ನಾಥ ಹೆಬ್ಬಾಳೆ ಅವರದು ಮಾತೃ ಹೃದಯಿ ವ್ಯಕ್ತಿತ್ವ. ಸದಾ ಜೀವಪರ, ಜನಪರ ಕಾಳಜಿ ಧ್ಯಾನಿಸುವ ಅಧ್ಯಾಪಕ, ಕೌಟುಂಬಿಕ, ಸಾಮಾಜಿಕವಾಗಿಯೂ ಅಂತಃಕರಣ ಹೊಂದಿದ ಜೀವ’ ಎಂದು ಬಣ್ಣಿಸಿದರು.

ಬಸವಕಲ್ಯಾಣ ಬಸವೇಶ್ವರ ಸ್ನಾತಕೋತ್ತರ ಕಾಲೇಜು ಪ್ರಾಚಾರ್ಯ ಡಾ. ಶಾಂತಲಾ ಪಾಟೀಲ, ಪ್ರೊ. ಜಗನ್ನಾಥ ಹೆಬ್ಬಾಳೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ಕಾರ್ಯಕ್ರಮದಲ್ಲಿ ಡಾ .ರಾಮಚಂದ್ರ ಗಣಾಪೂರ, ಡಾ. ಸಾವಿತ್ರಿ ಹೆಬ್ಬಾಳೆ, ಡಾ ವಿಜಯಕುಮಾರ ಬಿಳಗಿ, ಡಾ. ಸುರೇಖಾ ಬಿರಾದಾರ ಸೇರಿ ಹಲವರಿದ್ದರು. ಸುನಿತಾ ಕೂಡ್ಲಿಕರ ಸ್ವಾಗತಿಸಿದರು. ಬಸವರಾಜ ಖಂಡಾಳೆ ನಿರೂಪಿಸಿದರು.ಡಾ. ಸಂಗಪ್ಪ ತೌಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X