ಔರಾದ್ ತಾಲ್ಲೂಕಿನ ಬಸವಕೇಂದ್ರದ ಅಧ್ಯಕ್ಷರಾಗಿ ಜಗನ್ನಾಥ ಮೂಲಗೆ ಹಾಗೂ ಯುವ ಬಸವಕೇಂದ್ರದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಟಂಕಸಾಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಬಸವಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
12ನೇ ಶತಮಾನ ಬಸವಾದಿ ಶರಣರ ಕಾಲವಾದರೆ 21ನೆಯ ಶತಮಾನ ಬಸವಾದಿ ಶರಣರ ಪ್ರಚಾರ ಮತ್ತು ಪ್ರಸಾರದ ಕಾಲ, ಹೀಗಾಗಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಹಾಗೂ ಬಸವಾದಿ ಶರಣರ ವಿಚಾರಗಳನ್ನು ಜನಮನಕ್ಕೆ ಮುಟ್ಟಿಸುವ ಉದ್ದೇಶದಿಂದ ಔರಾದ ತಾಲ್ಲೂಕಿನ ಬಸವಕೇಂದ್ರದ ತಾಲೂಕು ಅಧ್ಯಕ್ಷರಾಗಿ ಶರಣ ಜೀವಿ ಜಗನ್ನಾಥ ಮೂಲಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಕ್ರಿಯಾಶೀಲ ವ್ಯಕ್ತಿತ್ವದ ಉತ್ಸಾಹಿಗಳಾದ ಮಲ್ಲಿಕಾರ್ಜುನ ಟಂಕಸಾಲೆ ಅವರನ್ನು ಔರಾದ ತಾಲೂಕಿನ ಯುವ ಬಸವಕೇಂದ್ರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಶರಣಪ್ಪ ಮಿಠಾರೆ ಹಾಗೂ ಯುವ ಬಸವಕೇಂದ್ರದ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!
ಈರ್ವರು ಈ ಕೂಡಲೇ ಕಾರ್ಯಭಾರವನ್ನು ವಹಿಸಿಕೊಂಡು ಬಸವತತ್ವ ಪ್ರಸಾರ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಬೇಕೆಂದು ಮತ್ತು ತಾಲ್ಲೂಕು ಸಮಿತಿಗಳನ್ನು ರಚಿಸಿಕೊಂಡು ಜಿಲ್ಲಾ ಬಸವಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.