ಬೆಳಗಾವಿಯಲ್ಲಿ ʼಜೈ ಮಹಾರಾಷ್ಟ್ರʼ ಘೋಷಣೆ; ಶಾಸಕ ಅಭಯ್ ಪಾಟಿಲ್ ಸೇರಿ ಮೂವರ ವಿರುದ್ಧ ದೂರು‌ ದಾಖಲು

Date:

ಬೆಳಗಾವಿ ಕಾರ್ಯಕ್ರಮದಲ್ಲಿ ʼಜೈ ಮಹಾರಾಷ್ಟ್ರʼ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟಿಲ್, ಪಾಲಿಕೆ ಮೇಯರ್ ಸವಿತಾ ಕಾಂಬಳೆ ಹಾಗೂ ಉಪಮೇಯರ್ ಆನಂದ ಚವ್ಹಾಣ್ ವಿರುದ್ಧ ಕಿತ್ತೂರು ಕರ್ನಾಟಕ ಸೇನೆ ಅಧ್ಯಕ್ಷ ಮಹದೇವ ತಳವಾರ ಟಿಳಕವಾಡಿಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

“ಬೆಳಗಾವಿ ನೆಲದಲ್ಲಿ ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿ ನಾಡದ್ರೋಹ ಎಸಗಲಾಗಿದೆ. ಅಲ್ಲದೆ, ಪಾಲಿಕೆಯಿಂದ ₹45 ಲಕ್ಷ ಅನುದಾನದಲ್ಲಿ ಛತ್ರಪತಿ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಾಣ ಮಾಡಲಾಗಿದೆ. ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದರೂ ಶಾಸಕ ಅಭಯ್ ಪಾಟೀಲ್ ಅನಧಿಕೃತವಾಗಿ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ. ಮೂರ್ತಿ ಲೋಕಾರ್ಪಣೆ ವೇಳೆ ಜೈ ಮಹಾರಾಷ್ಟ್ರ ಎಂದು ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೆ ಬೋಸಲೆ ಘೋಷಣೆ ಕೂಗಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು, ಮೇಯರ್, ಉಪ ಮೇಯರ್ ಚಪ್ಪಾಳೆ ತಟ್ಟಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅಪಮಾನ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಮಹದೇವ ತಳವಾರ್ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಬಾಣಂತಿಯನ್ನು ಮನೆಯಿಂದ ಹೊರ ಹಾಕಿ ಅಮಾನವೀಯತೆ ಮೆರೆದ ಫೈನಾನ್ಸ್ ಕಂಪೆನಿ

ದೂರು ಸ್ವೀಕೃತ ಪ್ರತಿ ನೀಡಿ, ಜನಪ್ರತಿನಿಧಿಗಳ ವಿರುದ್ಧ ದೂರು ನೀಡಿರುವ ಹಿನ್ನೆಲೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...