ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಅಧಿವೇಶನದಲ್ಲಿ ಚರ್ಚೆ : ಲಕ್ಷ್ಮಣ ಸವದಿ

Date:

  • ನಂದಿಪರ್ವತ ಆವರಣದಲ್ಲಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ
  • ಹತ್ಯೆಯನ್ನು ಖಂಡಿಸಿ ಚಿಕ್ಕೋಡಿಯಲ್ಲಿ ನಾಳೆ ಶಾಂತಿಯುತ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಶಾಸಕ ಲಕ್ಷ್ಮಣ ಸವದಿ, ಪ್ರಕರಣದ ಬಗ್ಗೆ ಸೋಮವಾರದಿಂದ ಮತ್ತೆ ಆರಂಭವಾಗಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆ ನಡೆಸುವುದಾಗಿ ಹೇಳಿದರು.

- Advertisement -

ಹಿರೇಕೋಡಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ, ‘ಜೈನಮುನಿ ಹತ್ಯೆಯಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ಬೆಳಗಾವಿ ಜಿಲ್ಲೆಯ ಶಾಸಕರು ಇದನ್ನು ಉಗ್ರವಾಗಿ ಖಂಡಿಸುತ್ತೇವೆ. ನಾಳೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಗಮನಕ್ಕೆ ತಂದು, ಅಧಿವೇಶನದಲ್ಲಿ ಈ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸುತ್ತೇವೆ. ಮಹಾರಾಜರನ್ನು ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಕಾನೂನು ಚೌಕಟ್ಟಿನಲ್ಲಿ ಗರಿಷ್ಠ ಶಿಕ್ಷೆ ಕೊಡಿಸಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
jain monk

ನಂದಿಪರ್ವತ ಆವರಣದಲ್ಲಿ ಜೈನಮುನಿ ಅಂತ್ಯಕ್ರಿಯೆ

ಜೈನ ಮಠಗಳ ಮಹಾಸ್ವಾಮಿ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಹಾಗೂ ವರೂರ್ ಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಜೈನ ಧರ್ಮದ ಧಾರ್ಮಿಕ ವಿಧಿವಿಧಾನಗಳಂತೆ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆಯು ನಂದಿಪರ್ವತದ ಆವರಣದಲ್ಲಿ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ಸಾವಿರಾರು ಭಕ್ತರು ಸೇರಿ, ಅಂತಿಮ ನಮನ ಸಲ್ಲಿಸಿದರು. ಭೀಕರ ಹತ್ಯೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಕಾಮಕುಮಾರ ನಂದಿ ಮಹಾರಾಜ (51) ಅವರು ಕಳೆದ ಎರೆಡು ದಿನಗಳ ಹಿಂದೆ ಭೀಕರವಾಗಿ ಹತ್ಯೆಗೀಡಾಗಿದ್ದರು. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಾಳೆ ಶಾಂತಿಯುತ ಪ್ರತಿಭಟನೆ
ಅಂತ್ಯಕ್ರಿಯೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, “ಜೈನ ಧರ್ಮದ ಅದ್ಭುತ ಸೂರ್ಯವೊಂದು ಅಸ್ತಂಗತವಾಗಿದೆ. ಈ ಹತ್ಯೆಯನ್ನು ಖಂಡಿಸಿ ನಾವು ನಾಳೆ ಚಿಕ್ಕೋಡಿ ಆರ್‍‌ಡಿಪಿ ಕಾಲೇಜಿನಿಂದ 10 ಗಂಟೆಗೆ ಶಾಂತಿಯುತವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಇನ್ನು ಮುಂದೆ ಯಾವುದೇ ಸ್ವಾಮೀಜಿಗಳಿಗೆ ಈ ರೀತಿ ಆಗದಂತೆ ರಕ್ಷಣೆ ಕೊಡುವಂತೆ ಸರ್ಕಾರಕ್ಕೆ ಆಗ್ರಹಿಸಲು ಶಾಂತಿಯುತ ಪ್ರತಿಭಟನೆ ನಡೆಯಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...