ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು , ತನಿಖೆ ನಡೆಸಲು ಎಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಆಗ್ರಹಿಸಿದೆ.
ಈ ಸಂಬಂಧ ವೇದಿಕೆ ಜಿಲ್ಲಾ ಸಂಚಾಲಕ ಬಾಬುರಾವ ಕೌಠಾ, ಪ್ರಕಾಶ ಭಂಗಾರೆ , ನಾಗೇಶ್ ದೇವರೆ ಅವರು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ದೂರು ನೀಡಿದ್ದಾರೆ.
ಕೌಠಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಜನರಿಗೆ ಕುಡಿಯಲು ನೀರು ಪೂರೈಕೆ ಮಾಡುವ ಕಾಮಗಾರಿಗಾಗಿ ₹2.88 ಕೋಟಿ ಮಂಜೂರಾಗಿದೆ. ನೀರಿನ ಮೂಲ ಗುರುತಿಸದೆ ಹಾಗೂ ಬಾವಿ ಕೊರೆಯದೇ ಹಳೆ ಕೊಳವೆ ಬಾವಿ ನೀರು ಬಳಸಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನುದಾನ ಖರ್ಚಾದರೂ ಜನರಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ನೀರಿಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ದೂರಿದರು.
ಈಗಾಗಲೇ ಕಾಮಗಾರಿಗಳಿಗೆ ಹಣ ದುರ್ಬಳಕೆ ಮಾಡಿ ನಕಲಿ ಬಿಲ್ಲು ಸೃಷ್ಟಿಸಿ ಹಣ ಪಾವತಿಸಿರುವ ಕಿರಿಯ ಅಭಿಯಂತರರು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರಕಾರದ ನಿಯಮದಂತೆ 3 ವರ್ಷ ಅವಧಿ ಮುಗಿದಿದ್ದು, ಕೂಡಲೇ ವರ್ಗಾವಣೆ ಎಇಇ ಹಾಗೂ ಜೆಇ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಕಾರಂಜಾ ಸಂತ್ರಸ್ತರಿಗೆ ಸಿಗದ ಪರಿಹಾರ; ಕೊರಳಿಗೆ ಹಗ್ಗ ಕಟ್ಟಿಕೊಂಡು ರೈತರ ಪ್ರತಿಭಟನೆ
ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜನರಿಗೆ ಕುಡಿಯುವ ನೀರು ಸಿಗುವಂತೆ ಕಾಮಗಾರಿ ಮುಂದುವರಿಸಬೇಕು. ಇಲ್ಲದಿದ್ದರೆ ಬೇಡಿಕೆಗಳು ಈಡೇರಿಸುವಂತೆ ಕೌಠಾ (ಬಿ) ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.