ಬೆಂಗಳೂರು | ಫ್ಯಾಸಿಸ್ಟ್ ಪ್ರಭಾವದ ಬಗ್ಗೆ ಆತಂಕ, ಸಮಾಜದ ಒಗ್ಗಟ್ಟಿಗೆ ಜಮಾಅತೆ ಇಸ್ಲಾಮೀ ಹಿಂದ್ ಕರೆ

Date:

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವಾರ್ಷಿಕ ಸಭೆಯಲ್ಲಿ ದೇಶದ ಪ್ರಸ್ತುತ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಯಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

- Advertisement -

ಮೇ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಸಾದ್ ಬೆಳಗಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ದೇಶದಲ್ಲಿ ಹೆಚ್ಚುತ್ತಿರುವ ಫ್ಯಾಸಿಸ್ಟ್ ಶಕ್ತಿಗಳ ಪ್ರಭಾವ ಹಾಗೂ ಇತ್ತೀಚಿನ ಐದು ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಆತಂಕ ವ್ಯಕ್ತಪಡಿಸಲಾಯಿತು. ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿವಿಧ ಹಂತಗಳಲ್ಲಿ ಎದ್ದಿರುವ ಪ್ರಶ್ನೆಗಳು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಘನತೆಗೆ ಧಕ್ಕೆಯುಂಟುಮಾಡುತ್ತಿರುವುದಾಗಿ ಸಭೆ ಅಭಿಪ್ರಾಯಪಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2026 05 06 at 8.45.27 PM

ದೇಶದ ಜಾತ್ಯತೀತ ಸ್ವರೂಪ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಉಳಿಸಲು ನಾಗರಿಕ ಸಮಾಜ ನಡೆಸುತ್ತಿರುವ ಹೋರಾಟವನ್ನು ಸಭೆ ಶ್ಲಾಘಿಸಿದ್ದು, ಅದನ್ನು ಇನ್ನಷ್ಟು ತಾಳ್ಮೆ ಹಾಗೂ ಧೈರ್ಯದೊಂದಿಗೆ ಮುಂದುವರಿಸಲು ಕರೆ ನೀಡಲಾಗಿದೆ.

ಇದೇ ವೇಳೆ ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಯನ್ನು ತುಲನಾತ್ಮಕವಾಗಿ ಆಶಾದಾಯಕವೆಂದು ಪರಿಗಣಿಸಿದ ಸಭೆ, ಇತ್ತೀಚಿನ ಉಪಚುನಾವಣೆಗಳಲ್ಲಿ ಜಾತ್ಯತೀತ ಅಭ್ಯರ್ಥಿಗಳ ಗೆಲುವು ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದೆ. ಆದರೆ ಚುನಾವಣಾ ಸಂದರ್ಭಗಳಲ್ಲಿ ಮುಸ್ಲಿಂ ರಾಜಕೀಯ ಪ್ರತಿನಿಧಿಗಳಲ್ಲಿ ಕಂಡುಬಂದ ಒಗ್ಗಟ್ಟಿನ ಕೊರತೆ ಹಾಗೂ ದೂರದೃಷ್ಟಿಯ ಅಭಾವ ಕಳವಳಕಾರಿ ವಿಚಾರವೆಂದು ಅಭಿಪ್ರಾಯಪಟ್ಟಿದೆ.

ಸಮುದಾಯದ ಸಂಯುಕ್ತ ವೇದಿಕೆಗಳು ಹಾಗೂ ಧಾರ್ಮಿಕ ಮುಖಂಡರು ಇಂತಹ ಸಂದರ್ಭದಲ್ಲಿ ಇನ್ನಷ್ಟು ಸಕಾರಾತ್ಮಕ ಮತ್ತು ಪರಿಣಾಮಕಾರಿ ಪಾತ್ರ ವಹಿಸಬೇಕೆಂದು ಸಭೆ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...